ಮೈಸೂರಿನ ದರೋಡೆಕೋರರ ಬಗ್ಗೆ ಮಾಹಿತಿ ನೀಡಿದ್ರೆ 5 ಲಕ್ಷ ಅವಾರ್ಡ್!
1 min readಮೈಸೂರು : ಮೈಸೂರಿನ ಚಿನ್ನದಂಗಡಿಯಲ್ಲಿ ದರೋಡೆ ಮಾಡಿ ಅಮಾಯಕನ ಸಾವಿಗೆ ಕಾರಣರಾದ ಕೊಲೆಗಡುಕರ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ಬಹುಮಾನ ನೀಡುವುದಾಗಿ ಪೊಲೀಸ್ ಇಲಾಖೆ ಘೋಷಣೆ ಮಾಡಿದೆ. ಈಗಾಗಲೇ ಇವರ ಶೋಧ ಕಾರ್ಯ ಮುಂದುವರೆದಿದ್ದು, 25 ಪೊಲೀಸ್ ಅಧಿಕಾರಿ, 80 ಮಂದಿ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡ ಗಳನ್ನ ಇದಕ್ಕಾಗಿ ನೇಮಕ ಮಾಡಲಾಗಿದೆ.
ದರೋಡೆಕೋರರ ಕೃತ್ಯದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾರ್ವಜನಿಕರು ಇವರ ಪತ್ತೆಗೆ ಸಹಕರಿಸಿ ಎಂದು ಮನವಿ ಮಾಡಲಾಗಿದೆ. ಅಲ್ಲದೆ ದರೋಡೆಕೋರರ ಬಗ್ಗೆ ಮಾಹಿತಿ ನೀಡಿದರೆ ಮಾಹಿತಿ ನೀಡಿದವರ ಬಗ್ಗೆ ಗೌಪ್ಯತೆ ಕಾಪಾಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ.