ಕಬಿನಿ ಜಲಾಶಯ ವ್ಯಾಪ್ತಿಗೆ ಬರುವ ಕೆರೆ ಕಟ್ಟೆಗಳಿಗೆ ನೀರು ಹರಿಸಲು ಆದೇಶ
1 min readಮೈಸೂರು: 2024-25 ನೇ ಸಾಲಿನ ಜಲವರ್ಷದಲ್ಲಿ ಕಬಿನಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆಯು ಪ್ರಾರಂಭವಾಗಿದ್ದು, ಕಬಿನಿ ಜಲಾಶಯಕ್ಕೆ ಒಳಹರಿವು ಬರುತ್ತಿದ್ದು, ಒಳಹರಿವಿನ ನೀರಿನ ಪ್ರಮಾಣ ಹಾಗೂ ಒಟ್ಟಾರೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಲಭ್ಯತೆ ಮೇರೆಗೆ ಕಬಿನಿ ಎಡದಂಡೆ ಮತ್ತು ಬಲದಂಡೆ ನಾಲೆಗಳ ಮುಖಾಂತರ ಜನ ಜಾನುವಾರುಗಳಿಗೆ ಕುಡಿಯಲು ಅನುಕೂಲವಾಗುವಂತೆ ಕೆರೆ ಕಟ್ಟೆಗಳಿಗೆ ಜುಲೈ 10 ರಿಂದ 25 ರವರೆಗೆ ನೀರು ಹರಿಸಲು ಉದ್ದೇಶಿಸಲಾಗಿದೆ.
ಕಬಿನಿ ಜಲಾಶಯದ ವ್ಯಾಪ್ತಿಗೆ ಬರುವ ಅಚ್ಚುಕಟ್ಟುದಾರರು ನೀರಾವರಿ ಅಧಿಕಾರಿಗಳೊಡನೆ ಸಹಕರಿಸಿ ಕೆರೆ ಕಟ್ಟೆಗಳಿಗೆ ಕುಡಿಯುವ ಮತ್ತು ಜನ ಜಾನುವಾರುಗಳ ಉಪಯೋಗಕ್ಕಾಗಿ ಮಾತ್ರ ನೀರನ್ನು ಬಳಸಬೇಕು.
ಮುಂದಿನ ದಿನಗಳಲ್ಲಿ ಜಲಾಶಯಕ್ಕೆ ಬರುವ ಒಳಹರಿವಿನ ಪ್ರಮಾಣವನ್ನು ಆಧರಿಸಿ ಅಚ್ಚುಕಟ್ಟು ಪ್ರದೇಶಕ್ಕೆ 2024-25 ನೇ ಸಾಲಿನ ಖಾರೀಪ್ ಬೆಳೆಗಳಿಗೆ ನಾಲೆಗಳ ಮುಖೇನ ನೀರು ಬಿಡುವ ಬಗ್ಗೆ ಕಬಿನಿ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆ ಕರೆದು ಸಮಿತಿಯಲ್ಲಿ ತೀರ್ಮಾನಿಸಲಾಗುವುದು ಎಂದು ಕಬಿನಿ ನೀರಾವರಿ ಸಲಹಾ ಸಮಿತಿಯ ಕಬಿನಿ ಮತ್ತು ವರಣಾ ನಾಲಾ ವೃತ್ತ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಧೀಕ್ಷಕ ಇಂಜಿನಿಯರ್ ಮಹೇಶ.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.