ಈ ಬಾರಿ ನಾಡಹಬ್ಬ ಮೈಸೂರು ದಸರಾ ಅದ್ದೂರಿಯಾಗಿ.!
1 min read*ದಸರಾ ಮಹೋತ್ಸವ ಜನರ ಉತ್ಸವ ಆಗಬೇಕು*
*ಕಳೆದ ವರ್ಷ ಕೊರೋನಾ-ಬರಗಾಲ ಕಾರಣಕ್ಕೆ ಹೆಚ್ಚು ವಿಜ್ರಂಭಣೆ ಮಾಡಲಿಲ್ಲ*
- *ಈ ಬಾರಿ ವಿಜ್ರಂಭಣೆ ಇರಲಿ: ಸಿ.ಎಂ.ಸಿದ್ದರಾಮಯ್ಯ*
ಬೆಂಗಳೂರು ಆ 12: ದಸರಾ ಮಹೋತ್ಸವ ಸಂಬಂಧ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಹೈ ಪವರ್ ಕಮಿಟಿ ಸಭೆಯಲ್ಲಿ ಮಾತನಾಡಿದರು.
*ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು..*
*ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ.
*ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು*
*ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿಯೊಂದೂ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು.
*ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ ಕೆಲಸಗಳ ಪ್ರದರ್ಶನ ಮತ್ತು ತಿಳಿವಳಿಕೆ ಮೂಡಿಸಬೇಕು.
*ಟ್ಯಾಬ್ಲೋಗಳಲ್ಲಿ ಹೊಸತನ ಇರಲಿ.
*ವಿಜ್ರಂಭಣೆಯ ನಾಡ ಹಬ್ಬಕ್ಕೆ ಅಗತ್ಯವಿದ್ದಷ್ಟು ಹಣವನ್ನು ನೀಡುತ್ತೇವೆ*
*ದೀಪಾಲಂಕಾರ ಈ ಬಾರಿ 21 ದಿನ ಇರಲಿ.
*ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆ ಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ.
*ಗೋಲ್ಡ್ ಕಾರ್ಡ್ ಗಳನ್ನು ಮುಂಚಿತವಾಗಿ ಮಾಡಿ.
*ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು.
*ಕರ್ನಾಟಕ ಸಂಭ್ರಮ 50 ನವೆಂಬರ್ ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಿ.
*ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಎನ್ನುವ ತೀರ್ಮಾನವನ್ನು ಮುಖ್ಯಮಂತ್ರಿಗಳಿಗೆ ಒಪ್ಪಿಸಿ ಸಭೆ ನಿರ್ಧರಿಸಿತು.
*ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ಸ್ವಲ್ಪ ಹೆಚ್ಚಿನ ಸಮಯ ಏರ್ ನಡೆಸಲೂ ವಿನಂತಿಸಲಾಗುವುದು.
*ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು.
*ಮಾಮೂಲು ಹಳೆ ಪದ್ಧತಿಗಳಲ್ಲೇ ಮಾಡುವುದಕ್ಕಿಂತ upgrade (ಉನ್ನತೀಕರಿಸಿ) ಮಾಡಿ.