ಸರ್ಕಾರಕ್ಕೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಸಲಹೆ
1 min readಮೈಸೂರು: ಕೊರೋನಾ ಸೋಂಕಿಗೆ ವೈಜ್ಞಾನಿಕವಾಗಿ ಸಾಬೀತಾಗದ ಔಷದ ನೀಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ಅನಗತ್ಯ ವೆಚ್ಚವಾಗುತ್ತಿದೆ ಎಂದು ಸರ್ಕಾರಕ್ಕೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಐವೆರ್ ಮೆಕ್ಟಿನ್ ಔಷಧ ಕೋವಿಡ್ ಗೆ ಉಪಯೋಗವಿಲ್ಲ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಹಲವು ತಜ್ಞರು ತಿಳಿಸಿದ್ದಾರೆ. ಅಲ್ಲದೇ ಈ ಔಷಧ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಆದರು ಹಲವು ಆಸ್ಪತ್ರೆ, ಆರೋಗ್ಯ ಕೇಂದ್ರದಲ್ಲಿ ಇದನ್ನು ನೀಡಲಾಗ್ತಿದೆ.
ಕೂಡಲೇ ತಜ್ಞರ ಸಮಿತಿ ರಚಿಸಿ ಯಾವ ಔಷಧ ನೀಡಬೇಕೆಂಬ ವರದಿ ಪಡೆಯಲಿ ಎಂದು ಆರೋಗ್ಯ ಸಚಿವ ಸುಧಾಕರ್’ಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.