ಕೊರೊನಾಗೆ ಇಬ್ಬರು ಕೊರೊನಾ ವಾರಿಯರ್ಸ್ ಬಲಿ
1 min readಮೈಸೂರು: ಮೈಸೂರಿನಲ್ಲಿ ಕೊರೊನಾ ಅಟ್ಟಹಾಸ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ ಕೊರೊನಾಗೆ ಇಬ್ಬರು ಕೊರೊನಾ ವಾರಿಯರ್ಸ್ ಬಲಿಯಾಗಿದ್ದಾರೆ.
ಬ್ಲ್ಯಾಕ್ ಫಂಗಸ್ ಆಗಿದ್ದ ಇಬ್ಬರು ಕೊರೊನಾ ವಾರಿಯರ್ಸ್ ಸಾವನ್ನಪ್ಪಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆ ನೌಕರರಾದ ವಿನೋದ್ (28) ರವಿ (38) ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ರವಿ ಕೋವಿಡ್ ಮೃತ ದೇಹ ಸಾಗಿಸುವ ವಾಹನದ ಚಾಲಕನಾಗಿದ್ದು 16 ದಿನದ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ನಂತರ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿತ್ತು. ಹೀಗಾಗಿ ಶಸ್ತ್ರಚಿಕಿತ್ಸೆ ಸಹಾ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರವಿ ಅವರು ಮೃತಪಟ್ಟಿದ್ದಾರೆ.
ವಿನೋದ್ ಫಾಗಿಂಗ್ ವಾಹನದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೂರು ದಿನದ ಹಿಂದೆ ಸೋಂಕು ಧೃಡವಾಗಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.