ಮೈಸೂರಿನ ಹೆಸರಾಂತ ಛಾಯಾಗ್ರಾಹಕ ನೇತ್ರರಾಜು ಇನ್ನಿಲ್ಲ
1 min readಮೈಸೂರು: ಮೈಸೂರಿನ ಹೆಸರಾಂತ ಪತ್ರಿಕಾ ಛಾಯಾಗ್ರಾಹಕ ನೇತ್ರರಾಜು(62) ಹೃದಯಾಘಾತದಿಂದ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ.
ನಿನ್ನೆ ರಾತ್ರಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಇಹಲೋಕ ತ್ಯಜಿಸಿದ್ದಾರೆ. ಮೈಸೂರಿನ ಪ್ರತಿಷ್ಠಿತ ಪತ್ರಿಕೆಯಾದ ಆಂದೋಲನ, ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅವರ ಕುಟುಂಬಕ್ಕೆ ದೇವರು ದುಖ ಭರಿಸುವ ಶಕ್ತಿ ನೀಡಲಿ.
ಪತ್ರಕರ್ತರ ಸಂಘದಿಂದ ತೀವ್ರ ಸಂತಾಪ:
ಮೈಸೂರಿನ ಪ್ರಖ್ಯಾತ ಛಾಯಾಗ್ರಾಹಕ ನೇತ್ರರಾಜು ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾದರು ಎಂದು ತಿಳಿಸಲು ವಿಷಾದಿಸುತ್ತೇನೆ. ಆಂದೋಲನ, ಟೈಮ್ಸ್ ಆಫ್ ಇಂಡಿಯಾ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಇವರು ಕೆಲಸ ಮಾಡಿದ್ದರು. ಇವರ ಛಾಯಾಚಿತ್ರಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿದ್ದವು. 2014ರಲ್ಲಿ ಇವರು ಕರ್ನಾಟಕದ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದರು ಎಂದು ನೇತ್ರರಾಜು ಅವರ ನಿಧನಕ್ಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.