ಮೈಸೂರಿನಲ್ಲಿಂದು 2,545 ಮಂದಿ ಡಿಸ್ಚಾರ್ಜ್- 17 ಸಾವು, 2,241 ಮಂದಿಗೆ ಕೊರೋನಾ ಪಾಸಿಟಿವ್..!
1 min readಮೈಸೂರು: ಮೈಸೂರಿನಲ್ಲಿಂದು 2,241 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ1,31,656 ಕ್ಕೇರಿಕೆಯಾಗಿದೆ.
ಇನ್ನು ಇಂದು 2,545 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,14,998 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 15,134 ಕ್ಕೆ ಇಳಿಕೆಯಾಗಿದೆ.
ಅಲ್ಲದೆ ಮೈಸೂರಿನಲ್ಲಿಂದು 17 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೆ 1,524 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.