ಕೋವಿಡ್ ವಾರ್ ರೂಂಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅನಿರೀಕ್ಷಿತ ಭೇಟಿ
1 min readಮೈಸೂರು: ನೂತನ ಜಿಲ್ಲಾ ಕಚೇರಿಗಳ ಸಂಕೀರ್ಣದಲ್ಲಿರುವ ಕೋವಿಡ್ ವಾರ್ ರೂಂಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಶುಕ್ರವಾರ ಅನಿರೀಕ್ಷಿತ ಭೇಟಿ ನೀಡಿ ಅಲ್ಲಿನ ಕಾರ್ಯಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಾರ್ ರೂಂನಲ್ಲಿ ಕೆಲಸಮಾಡುತ್ತಿರುವ ಸ್ವಯಂ ಸೇವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ವಯಂ ಸೇವಕರಿಗೆ ಪ್ರತಿನಿತ್ಯ ರಾತ್ರಿ ಊಟವನ್ನು ರವಾನಿಸಿ ಸ್ವಯಂ ಸೇವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಹೆಲ್ಪಿಂಗ್ ಹ್ಯಾಂಡ್ಸ್ ಫೌಂಡೇಷನ್ ಕಾರ್ಯವನ್ನು ಶ್ಲಾಘಿಸಿದರು.
ಇದೆ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ಉಪವಿಭಾಗಾಧಿಕಾರಿ ಡಾ. ಎನ್.ಸಿ. ವೆಂಕಟರಾಜು, ಟ್ರಯೇಜ್ ನೋಡಲ್ ಅಧಿಕಾರಿ ಡಾ.ಬಿ.ಎಸ್.ಸೀತಾಲಕ್ಷ್ಮೀ, ಬೆಡ್ ಮ್ಯಾನೆಜ್ ಮೆಂಟ್ ಅಧಿಕಾರಿ ಡಾ.ಅಶೋಕ್, ಸಾಸ್ಟ್ ನೋಡಲ್ ಅಧಿಕಾರಿ ಡಾ. ಮೋನಿಷ, ಸಂಜಯ್ ಮನೋಹರ್, ಸುನೀಲ್ ಜಟ್ಟಿ ಸೇರಿದಂತೆ ಇತರರು ಹಾಜರಿದ್ದರು. ವಾರ್ ರೂಂನಲ್ಲಿ ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಗಳ ಅಧಿಕಾರಿ ನೌಕರರು ಸಹ ಕೆಲಸ ನಿರ್ವಹಿಸುತ್ತಿದ್ದಾರೆ.