ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು: 2 ದಿನಗಳ ವಿಶ್ರಾಂತಿಗೆ ವೈದ್ಯರ ಸಲಹೆ
1 min readಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.
ಜ್ವರ ಕಾಣಿಸಿಕೊಂಡ ಹಿನ್ಬೆಲೆಯಲ್ಲಿ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ. ಹೀಗಾಗಿ ಇಂದು ಮತ್ತು ನಾಳಿನ ಅವರ ಕಾರ್ಯಕ್ರಮಗಳು ರದ್ದಾಗಿದೆ. ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ.