ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ: ಶಾಂಕಿಂಗ್ ಹೇಳಿಕೆ ಕೊಟ್ಟ ಸಿಎಂ ಬಿಎಸ್ವೈ
1 min readಬೆಂಗಳೂರು: ಹೈಕಮಾಂಡ್ ಸೂಚಿಸಿದ ತಕ್ಷಣವೇ ಸಿಎಂ ಸ್ಥಾನದಿಂದ ಕೆಳಗಿಳಿಯುವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಶಾಂಕಿಂಗ್ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಚರ್ಚೆಗೆ ಇದು ಪುಷ್ಟಿ ನೀಡಿದಂತಾಗಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಈಗಲೇ ಬಿಜೆಪಿ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆ ಆಗ್ತಿದೆ.
ಬೆಂಗಳೂರಿನಲ್ಲಿ ಮಾತಾನಾಡಿದ ಸಿಎಂ ಯಡಿಯೂರಪ್ಪನವರು ನನ್ನ ಮೇಲೆ ಕೇಂದ್ರದ ಹೈಕಮಾಂಡ್ಗೆ ವಿಶ್ವಾಸ ಎಲ್ಲಿಯವರೆಗು ಇರುತ್ತೋ ಅಲ್ಲಿಯ ವರೆಗು ನಾನು ಸಿಎಂ ಆಗಿ ಮುಂದುವರೆಯುತ್ತೇನೆ. ಆಗೊಮ್ಮೆ ಆ ವಿಶ್ವಾಸ ಕಡಿಮೆಯಾಗಿ ಅವರು ಸೂಚನೆ ಕೊಟ್ಟರೆ ಆ ಕೂಡಲೇ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಕೆಳಗಿಳಿಯುತ್ತೇನೆ. ರಾಜ್ಯದ ಅಭಿವೃದ್ಧಿಗಾಗಿ ಪಕ್ಷದಲ್ಲಿ ಇದ್ದುಕೊಂಡು ಕೆಲಸ ಮಾಡುತ್ತೇನೆಂದು ಮಾರ್ಮಿಕವಾಗಿ ನುಡಿದಿದ್ದಾರೆ. ಜೊತೆಯಲ್ಲಿ ಈ ತಿಂಗಳ ಕೊನೆಯಲ್ಲಿ ಸಿಎಂ ಬದಲಾವಣೆ ಚರ್ಚೆಗೆ ಇದು ಪೂರಕವಾಗಿದೆ ಎಂಬಂತೆ ಹೇಳಿಕೆ ನೀಡಿದ್ದಾರೆ.