ಥ್ಯಾಂಕ್ಯೂ ಮೈಸೂರು: ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದ್ದೇನೆ – ರೋಹಿಣಿ ಸಿಂಧೂರಿ
1 min readಮೈಸೂರು: ಮೈಸೂರು ನನಗೆ ತಾಯಿ ಮನೆ ಅನುಭವ ನೀಡಿದೆ. ಒಬ್ಬ ಮಗಳಾಗಿ ಮೈಸೂರಿನ ಎಲ್ಲ ಜನತೆಗೆ ನಾನು ಧನ್ಯವಾದ ಹೇಳ್ತಿನಿ ಅಂತ ಮೈಸೂರಿನಲ್ಲಿ ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ಹೇಳಿಕೆ ನೀಡಿದ್ದಾರೆ.
ಹೊಸದಾಗಿ ಬಂದ ಜಿಲ್ಲಾಧಿಕಾರಿಗೆ ಶುಭಾಶಯ ಹೇಳಲು ಬಂದಿದ್ದೆ. ಜಿಲ್ಲೆಯ ವಸ್ತುಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದೇನೆ. ಕೋವಿಡ್ ಕೆಲಸಗಳ ಬಗ್ಗೆಯೂ ಮಾಹಿತಿ ನೀಡಿದ್ದೇನೆ. ಈ ವರ್ಗಾವಣೆಯ ನಿರೀಕ್ಷೆ ಮಾಡಿರಲಿಲ್ಲ. ಒಳ್ಳೆಯ ಕೆಲಸ ಮಾಡುವ ಟೈಂ ಅಲ್ಲಿ ಈ ವರ್ಗಾವಣೆ ಆಗಿದೆ. ಆದರೂ ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದ್ದೇನೆ. ಏನ್ ನಡೆದಿದೆ ಹೇಗೆ ನಡೆದಿದೆ ಅನ್ನೋದು ಎಲ್ಲರ ಮುಂದೆ ನಡೆದಿದೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡೋಲ್ಲ.
ಅವರ ಹತಾಶೆ ಹಾಗೂ ಅಭದ್ರತೆ ಈ ರೀತಿ ಮಾತನಾಡೋದು ಸರಿಯಲ್ಲ. ಯಾವುದೋ ಅಧಿಕಾರಿಯನ್ನ ತೆಗೆಸಿ ಮಿಷನ್ ಮುಗಿಯಿತು ಅಂದುಕೊಳ್ಳೋದು ತಪ್ಪು. ಈ ಥರ ಬೆಳವಣಿಗೆ ಯಾವ ಜಿಲ್ಲೆ ಯಾವ ಸಂಸ್ಥೆಯಲ್ಲಿ ಆದರೂ ವ್ಯವಸ್ಥೆ ಸರಿ ಮಾಡೋಕೆ ಆಗೋಲ್ಲ. ಭೂ ಮಾಫಿಯಾಗೆ ಬಲಿಯಾದ್ರ ಅನ್ನೋ ಪ್ರಶ್ನೆಗೆ ನೋ ಕಾಮೆಂಟ್ ಎಂದ ರೋಹಿಣಿ ಸಿಂಧೂರಿ. ಥ್ಯಾಂಕ್ಯೂ ಮೈಸೂರು ಎಂದು ಹೇಳಿ ಮೈಸೂರಿನಿಂದ ಡಿಸಿ ರೋಹಿಣಿ ಸಿಂಧೂರಿ ನಿರ್ಗಮಿಸಿದ್ದಾರೆ.