ಕೋವಿಡ್ ನಿರ್ವಹಣೆ ಕುರಿತು ಪರಿಶೀಲನೆ
1 min read
ಮೈಸೂರು: ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆ ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಕೆಲ ಗ್ರಾಪಂಗಳಿಗೆ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎ.ಎಂ.ಯೋಗೀಶ್ ಅವರು ಕೋವಿಡ್ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.
ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮ ಪಂಚಾಯಿತಿ ಅಲ್ಲಿನ ಕೋವಿಡ್ ಅಂಕಿ ಅಂಶಗಳ ಮಾಹಿತಿ ಪಡೆದರು. ಹಾಗೂ ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಪರಿಶೀಲಿಸಿದರು. ಸರಗೂರು ತಾಲ್ಲೂಕಿನ ಬಿದರಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಅಲ್ಲಿನ ಕೋವಿಡ್ ಅಂಕಿ ಅಂಶಗಳ ಮಾಹಿತಿ ಪಡೆದರು. ಇದೇ ವೇಳೆ ಮುಂಬುರುವ ಮಳೆಗಾಲದಲ್ಲಿ ಕಬಿನಿ ಜಲಾಶಯ ತುಂಬಿ ಪ್ರವಾಹ ಉಂಟಾದರೇ, ಅಂತಹ ಸಮಯದಲ್ಲಿ ಯಾವ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂಬುದರ ಬಗ್ಗೆ ಮಾರ್ಗದರ್ಶನ ನೀಡಿದರು.

ಎನ್.ಬೆಳ್ತೂರು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸೋಂಕಿತರ ಆರೋಗ್ಯ ವಿಚಾರಿಸಿದರು. ಜತೆಗೆ ಅಲ್ಲಿನ ಕುಂದು ಕೊರತೆಗಳ ಬಗ್ಗೆ ಆಲಿಸಿದರು.
ಈ ವೇಳೆ ಬೀಚನಹಳ್ಳಿ ಗ್ರಾಪಂ ಪಿಡಿಒ ಪ್ರಭಾಕರ್ ಎಚ್.ಟಿ, ಬಿದರಹಳ್ಳಿ ಗ್ರಾಪಂ ಪಿಡಿಒ ಪರಮೇಶ್.ಜೆ, ಗ್ರಾಪಂ ಸದಸ್ಯರು ಸೇರಿದಂತೆ ಇತರರು ಇದ್ದರು.
