ಬೆಳ್ಳಂ ಬೆಳಗ್ಗೆ ಹೊತ್ತಿ ಉರಿದ ಮನೆ ಸಂಪೂರ್ಣ ಬೆಂಕಿಗೆ ಆಹುತಿ
1 min readಮೈಸೂರು: ಜಿಲ್ಲೆಯ ಟೀ ನರಸೀಪುರ ತಾಲ್ಲೂಕಿನ ಮೂಗೂರು ಗ್ರಾಮದ ಬಂಡಿಬೀದಿಯ ಗುರುಮಲ್ಲಪ್ಪ ಎಂಬುವರಿಗೆ ಸೇರಿದ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎನ್ನಲಾಗಿದೆ, ಮಂಗಳವಾರ ಬೆಳಗ್ಗೆ 9 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು ಗ್ರಾಮಸ್ಥರೆಲ್ಲ ಸೇರಿ ನೀರಿನ ಪೈಪ್ ಗಳ ಸಹಾಯದಿಂದ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು , ನಂತರ ಅಗ್ನಿ ಶಾಮಕದಳದ ಸಿಬ್ಬಂದಿಗಳು ಸಹ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.