ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕ ಘೋಷಣೆ
1 min readಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ಕುಮಾರ್ ಅವರು ಇಂದು ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಇಂದು ನಡೆದ ಸಭೆಯಲ್ಲಿ ಅಂತಿಮಗೊಳಿಸಲಾಗಿದ್ದು, ಜುಲೈ 19 ರಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಬೆಳಗ್ಗೆ 10.30ರಿಂದ 1.30ರ ತನಕ ಹಾಗೂ ಭಾಷಾ ವಿಷಯಗಳ ಪರೀಕ್ಷೆ 22ರಂದು ಬೆಳಗ್ಗೆ 10.30 ರಿಂದ 1.30ರ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದಾರೆ.
ಯಾವ ಪರೀಕ್ಷೆ ಯಾವಾಗ?
ಜುಲೈ 19: ಗಣಿತ, ಸಮಾಜ ವಿಜ್ಞಾನ ಹಾಗೂ ವಿಜ್ಞಾನ
ಜುಲೈ 22: ಕನ್ನಡ, ಇಂಗ್ಲೀಷ್, ಹಿಂದಿ ಪರೀಕ್ಷೆ
2021ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ 8,76,581 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಕಳೆದ ಬಾರಿ 8 ಲಕ್ಷದ 46 ಸಾವಿರ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಒಟ್ಟು ಪರೀಕ್ಷೆ ಕೇಂದ್ರಗಳು 73066 ಇರಲಿವೆ. ಕಳೆದ ಬಾರಿ 48 ಸಾವಿರ ಇತ್ತು. ಕೊರೊನಾ ಹಿನ್ನೆಲೆ ಪರೀಕ್ಷಾ ಕೊಠಡಿಗಳನ್ನು ಹೆಚ್ಚು ಮಾಡಲಾಗಿದೆ. ಎಲ್ಲ ಪ್ರಶ್ನೆ ಪತ್ರಿಕೆಗಳೂ ಆಬ್ಜೆಕ್ಟಿವ್ ಟೈಪ್, ಬಹುಆಯ್ಕೆ ಮಾದರಿ ಪ್ರಶ್ನೆ ಪತ್ರಿಕೆಗಳಾಗಿರುತ್ತವೆ. ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸಲು ಆರೋಗ್ಯ ಇಲಾಖೆ ವಿಸ್ತೃತ ಎಸ್ಒಪಿಗಳನನ್ನು ನೀಡಿದೆ. ಅದರಂತೆ ಪರೀಕ್ಷೆ ನಡೆಸಲಾಗುತ್ತದೆ.
ಪರೀಕ್ಷೆ ಕೇಂದ್ರಗಳು ಮಕ್ಕಳ ಸುರಕ್ಷಾ ಕೇಂದ್ರಗಳಿರಲಿವೆ. ಯಾವುದೇ ಆತಂಕ ಇಲ್ಲದೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ ಆಂತ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.