ವಿವೇಕಾನಂದರ ಸ್ಮಾರಕವನ್ನ ವಿರೋಧ ಮಾಡುತ್ತಿರುವುದು ನಾಚೀಕೆಗೇಡಿನ ಸಂಗತಿ: ಪ್ರತಾಪ್ ಸಿಂಹ
1 min readಮೈಸೂರು: ಮೈಸೂರಿನ ಮಾದರಿ ಸರ್ಕಾರಿ ಶಾಲೆ ಜಾಗದಲ್ಲಿ ವಿವೇಕ ಸ್ಮಾರಕ ನಿರ್ಮಾಣ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದು, ವಿವೇಕಾನಂದರು ಯಾವ ಪ್ರಬಲ ಜಾತಿಗೆ ಸೇರಿದವರಲ್ಲ. ಒಂದು ವೇಳೆ ಅವರು ಪ್ರಬಲ ಜಾತಿಗೆ ಸೇರಿದವರಾಗಿದ್ದರೆ. ಈ ವಿವಾದವೇ ಇಂದು ಬರುತ್ತಿರಲಿಲ್ಲ ಎಂದರು.
ಇಷ್ಟೊತ್ತಿಗೆ ಸ್ಮಾರಕ ನಿರ್ಮಾಣ ಆಗಿ ವರ್ಷಗಳೇ ಕಳೆಯುತ್ತಿದ್ದವು. ಅವರಿಗೆ ಜಾತಿಗೆ ಬೆಂಬಲ ಇಲ್ಲದ ಕಾರಣ ಈ ರೀತಿಯಾಗಿ ವಿವಾದ ಸೃಷ್ಟಿ ಮಾಡಲಾಗಿದೆ. ಇದು ಮೈಸೂರಿಗೆ ಆಗುತ್ತಿರುವ ಅವಮಾನ. ವಿವೇಕಾನಂದರು ಜಾತಿಯ ಐಕಾನ್ ಅಲ್ಲ, ಅವರು ರಾಷ್ಟ್ರದ ಐಕಾನ್. ಮಹಾರಾಜರೇ ಅವರನ್ನ ಪ್ರೀತಿಯಿಂದ ಗೌರವದಿಂದ ಕಂಡಿದ್ದಾರೆ. ಇದನ್ನ ನಾವು ಮೊದಲು ನೆನಪಿಟ್ಟುಕೊಳ್ಳಬೇಕು. ಸ್ಮಾರಕವನ್ನ ವಿರೋಧ ಮಾಡುತ್ತಿರುವುದು ನಾಚೀಕೆಗೇಡಿನ ಸಂಗತಿ. ಸಂಕುಚಿತ ಮನೋಭಾವದ ಜನ ಸ್ಮಾರಕದ ವಿರುದ್ಧ ಹೋರಾಟ ಮಾಡ್ತಿದ್ದಾರೆ.
ಬೆಂಗಳೂರಿನ ಫ್ಲೈಓವರ್ಗೆ ಹೆಸರಿಡುವ ವಿಚಾರದಲ್ಲು ಹೀಗೆ ಮಾಡಿದ್ರು. ಕೆಲವು ಸಂಕುಚಿತ ಮನೋಭಾವದ ಜನರು ಅಲ್ಲಿಯೂ ಹೀಗೆ ವಿರೋಧ ಮಾಡಿದ್ರು. ಬಳಿಕ ಸಾರ್ವಕರ್ ಹೆಸರನ್ನ ನಾಮಕರಣ ಮಾಡಲಾಯಿತು. ಮೈಸೂರಿನಲ್ಲು ಸಹ ಕೆಲ ಸಂಕುಚಿತ ಜನರು ಶಾಲೆಯ ನೆಪದಲ್ಲಿ ಹೋರಾಟ ಮಾಡ್ತಿದ್ದಾರೆ. ಬೇಕಿದ್ದರೆ ಈ ಶಾಲೆಯನ್ನ ಮುಂಭಾಗದ ಕಟ್ಟಡಕ್ಕೆ ಶಿಫ್ಟ್ ಮಾಡಬಹುದು. ಅಥವಾ ಕೂಗಳತೆಯ ದೇವರಾಜ ಶಾಲೆಗೆ ವರ್ಗಾಯಿಸಬಹುದು.
ಸಿಎಂ ಈ ಸರ್ಕಾರಿ ಶಾಲೆಯ ಜಾಗ ಹಸ್ತಾಂತರಕ್ಕೆ ಆದೇಶ ಮಾಡಿಕೊಡಲಿ. ನಾನು ಕೇವಲ ಎರಡೇ ಗಂಟೆಯಲ್ಲಿ ಕನ್ನಡ ಮಕ್ಕಳಿಗೆ ಅನ್ಯಾಯವಾಗದಂತೆ. ಶಾಲೆಯನ್ನ ಶಿಫ್ಟ್ ಮಾಡಿ ಸ್ಮಾರಕ ನಿರ್ಮಾಣಕ್ಕೆ ಮುಂದಾಗುತ್ತೇನೆ ಎಂದರು.