ಜು.25ಕ್ಕೆ ಕೆಸೆಟ್ ಪರೀಕ್ಷಾ ದಿನಾಂಕ ನಿಗದಿ
1 min readಮೈಸೂರು: ಕೋವಿಡ್ ನಿಂದಾಗಿ ಮುಂದೂಡಲ್ಪಟ್ಟಿದ್ದ ಕರ್ನಾಟ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್)ಗೆ ದಿನಾಂಕ ನಿಗದಿಯಾಗಿದೆ.
ಏಪ್ರಿಲ್11 ರಂದು ಪರೀಕ್ಷೆ ನಡೆಯಬೇಕಿತ್ತು. ಆದರೆ ಕೋವಿಡ್ ಎರಡನೇ ಅಲೆಯಿಂದಾಗಿ ಪರೀಕ್ಷೆ ಮುಂದೂಡಲ್ಪಟ್ಟಿತ್ತು. ಇದೀಗ ದಿನಾಂಕ ನಿಗದಿಯಾಗಿದ್ದು, ಇದೇ ತಿಂಗಳು 25 ರಂದು ಪರೀಕ್ಷೆ ನಡೆಯಲಿದೆ. ಇದೀಗ ಮೈಸೂರು ವಿಶ್ವವಿದ್ಯಾನಿಲಯ ದಿನಾಂಕ ನಿಗದಿ ಮಾಡಿ ಪ್ರಕಟಣೆ ಹೊರಡಿಸಿದೆ.