ಮೈಸೂರಿನಲ್ಲಿಂದು 211 ಹೊಸ ಕೋವಿಡ್ ಕೇಸ್- 6 ಮಂದಿ ಕರೋನಾಗೆ ಸಾವು!
1 min readಮೈಸೂರು: ಮೈಸೂರಿನಲ್ಲಿಂದು 211 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,70,362 ಕ್ಕೇರಿಕೆಯಾಗಿದೆ.
ಇನ್ನು ಇಂದು 275 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,65,479 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2627ಕ್ಕೆ ಇಳಿಕೆಯಾಗಿದೆ.
ಅಲ್ಲದೆ ಮೈಸೂರಿನಲ್ಲಿಂದು 06 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೆ 2,256 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.