ಮೈಸೂರಿನಲ್ಲಿಂದು 102 ಕೊರೊನಾ ಪಾಸಿಟಿವ್ ಕೇಸ್ ಪತ್ತೆ: ಓರ್ವ ಸಾವು
1 min readಮೈಸೂರು: ಮೈಸೂರಿನಲ್ಲಿಂದು 102 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,75,541ಕ್ಕೇರಿಕೆಯಾಗಿದೆ.
ಇನ್ನು ಇಂದು 83 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,72,192 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 996ಕ್ಕೆ ಏರಿಕೆಯಾಗಿದೆ.
ಅಲ್ಲದೆ ಮೈಸೂರಿನಲ್ಲಿಂದು ಓರ್ವ ಕೊರೊನಾ ಸೋಂಕಿತ ಸಾವನ್ನಪ್ಪಿದ್ದು ಇದುವರೆಗೆ 2,353 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.