ನಾಳೆಯಿಂದ ಆರಂಭವಾಗಬೇಕಿದ್ದ ಮೈಸೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ!
1 min readಮೈಸೂರು : ನಾಳೆಯಿಂದ ಆರಂಭವಾಗಬೇಕಿದ್ದ ಮೈಸೂರು ವಿವಿ ಪದವಿ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ. ಒಂದೇ ದಿನ ಎರಡು ವಿಷಯದ ಪರೀಕ್ಷೆಯಿದ್ದ ಕಾರಣ ಈ ಬಗ್ಗೆ ಪರೀಕ್ಷೆ ದಿನಾಂಕ ಬದಲಿಸುವಂತೆ ವಿದ್ಯಾರ್ಥಿಗಳಿಂದ ಸಾಕಷ್ಟು ಮನವಿ ಬಂದಿತ್ತು. ಇದರಿಂದ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ವಿವಿ ಕುಲಸಚಿವರು ನಾಳೆಯಿಂದ ಆರಂಭವಾಗಬೇಕಿದ್ದ ಪರೀಕ್ಷೆಯನ್ನ ದಿನಾಂಕ ಸೆ.13ರಿಂದ ಪರೀಕ್ಷೆಗಳು ಆರಂಭವಾಗಲಿದೆ ಎಂದು ‘ನನ್ನೂರು ಮೈಸೂರು’ ಗೆ ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಜ್ಞಾನಪ್ರಕಾಶ್ ಮಾಹಿತಿ ನೀಡಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳ ಹಿತದೃಷ್ಟಿ ನಮಗೆ ಮುಖ್ಯವಾಗಿದ್ದು, ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದೆ. ಅಲ್ಲದೆ ಪರೀಕ್ಷಾ ವೇಳಾಪಟ್ಟಿಯನ್ನು ಆದಷ್ಟು ಬೇಗ ನೀಡಲಾಗುವುದು ಎಂದು ಇದೇವೇಳೆ ತಿಳಿಸಿದ್ದಾರೆ.