ಮೈಸೂರಿನ ಕೆ.ಆರ್.ಕ್ಷೇತ್ರ ರಾಜ್ಯದಲ್ಲೇ ಶೇ.100ರಷ್ಟು ವ್ಯಾಕ್ಸಿನೇಷನ್ ಕ್ಷೇತ್ರ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
1 min readಮೈಸೂರು: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಮೈಸೂರಿನ ಕೆ.ಆರ್.ಕ್ಷೇತ್ರದ ಮೋದಿ ಯುಗ್ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು. ಶಾಸಕ ರಾಮದಾಸ್ ನೇತೃತ್ವದಲ್ಲಿ ಕೆ.ಆರ್.ಕ್ಷೇತ್ರದಲ್ಲಿ ಬೃಹತ್ ಲಸಿಕೆ ಅಭಿಯಾನ ನಡೆಯುತ್ತಿದೆ೦ ಮೋದಿ @71 ಆಜಾದ್ @75 ಮೋದಿ ಯುಗ್ ಉತ್ಸವ. ಇಂದು ಹೆಲ್ತ್ ಕಾರ್ಡ್ ನೀಡುವ ಕಾರ್ಯಕ್ರಮ. ಕೆ.ಆರ್.ಕ್ಷೇತ್ರದ ಬಡವರಿಗೆ ಹೆಲ್ತ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ.
ಮೋದಿ ಯುಗ್ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಮೈಸೂರಿನ ಕೆ.ಆರ್.ಕ್ಷೇತ್ರ ರಾಜ್ಯದಲ್ಲೇ ಶೇ.100ರಷ್ಟು ವ್ಯಾಕ್ಸಿನೇಷನ್ ಕ್ಷೇತ್ರ. ಇದನ್ನ ಇಂದು ಅಧಿಕೃತವಾಗಿ ಘೋಷಣೆ ಮಾಡುತ್ತಿದ್ದೇವೆ. ರಾಜ್ಯದಲ್ಲೇ ಮೊದಲ ಅತಿ ಹೆಚ್ಚು ವಾಕ್ಸಿನೆಷನ್ ಕ್ಷೇತ್ರ ಕೆ.ಆರ್.ಕ್ಷೇತ್ರ. ಶಾಸಕ ರಾಮದಾಸ್ ನೇತೃತ್ವದಲ್ಲಿಈ ಬೃಹತ್ ಲಸಿಕಾ ಅಭಿಯಾನ ನಡೆದಿದೆ. ಇದಕ್ಕೆ ಹಲವು ಸಂಘ ಸಂಸ್ಥೆಗಳು ಕೂಡ ಸಹಕಾರ ನೀಡಿವೆ. ರಾಜ್ಯದಲ್ಲಿಯು ಕೂಡ ಶೇ.80 ರಷ್ಟು ವಾಕ್ಸಿನ್ ಆಗಿದೆ. ಆದರೆ ಕೆಲ ಗ್ರಾಮ, ಗುಡ್ಡಗಾಡು ಪ್ರದೇಶದಲ್ಲಿ ವಾಕ್ಸಿನ್ ಅಭಿಯಾನ ಆಗಬೇಕಿದೆ. ಅಲ್ಲಿ ಜನರು ಮುಂದೆ ಬಂದು ವಾಕ್ಸಿನ್ ಪಡೆಯಲು ಹಿಂದೇಟು ಹಾಕ್ತಿದ್ದಾರೆ. ಅವರಿಗು ವಾಕ್ಸಿನ್ ಅರಿವು ಮೂಡಿಸಿ ವಾಕ್ಸಿನ್ ನೀಡುತ್ತೇವೆ ಎಂದರು.
ರಾಮದಾಸ್ಗೆ ಮಂತ್ರಿ ಆಗುವ ಎಲ್ಲ ಅರ್ಹತೆ ಇದೆ. ಆದರೆ ಅವರಿಗೆ ಸಚಿವ ಸ್ಥಾನ ನೀಡೋ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ. ಅವರ ನೇತೃತ್ವದಲ್ಲಿ ಮುಂದಿನ ದಸರಾ ನಡೆಯುತ್ತೆ. ಅಂದರೆ ಅವರು ಪಕ್ಷದ ಹಿರಿಯರು ಇದ್ದಾರೆ. ಹಾಗಾಗಿ ಅವರ ಮಾರ್ಗದರ್ಶನದಲ್ಲಿ ದಸರಾ ನಡೆಯಲಿದೆ. ಇದರಲ್ಲಿ ಬೇರೆ ಅರ್ಥ ಏನು ಇಲ್ಲ ಎಂದರು.
ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಮಂದಿಗೆ ಅವಕಾಶ ಮಾಡಿಕೊಡಲಾಗುವುದು. ತಾಂತ್ರಿಕ ಸಲಹಾ ಸಮಿತಿಗೆ ಈ ಬಗ್ಗೆ ವರದಿ ನೀಡಿದ್ದೇವೆ. ದಸರಾ ಜಂಬೂಸವಾರಿ ವೀಕ್ಷಣೆಗೆ ಅರಮನೆಯಲ್ಲಿ ಅವಕಾಶ. ಮೂರೂವರೆ ಮೀಟರ್ ಅಂತರ ಕಾಯ್ದುಕೊಂಡು ಜಂಬೂಸವಾರಿಗೆ ಅವಕಾಶ. ಜಂಬೂಸವಾರಿ ವೀಕ್ಷಣೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದೇವೆ. ತಾಂತ್ರಿಕ ಸಲಹ ಸಮಿತಿಗೆ ಈ ಮನವಿ ಮಾಡಿದ್ದೇವೆ.
ವರದಿ ಬಂದ ಬಳಿಕ ಅವರು ಅನುಮತಿ ಕೊಟ್ಟರೆ ಈ ಸೂಚನೆ ಪಾಲನೆಯಾಗಬೇಕು ಅಂತ ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿಕೆ ನೀಡಿದ್ದಾರೆ.