ಉತ್ತರ ಪ್ರದೇಶ ಹಿಂಸಾಚಾರ ಘಟನೆಯನ್ನು ಖಂಡಿಸಿದ ಬಡಗಲಪುರ ನಾಗೇಂದ್ರ, ಕುರುಬೂರು ಶಾಂತಕುಮಾರ್

1 min read

ಮೈಸೂರು,ಅ.4-ಉತ್ತರಪ್ರದೇಶದಲ್ಲಿ ಪ್ರತಿಭಟನಾ ನಿರತ ರೈತರ ಸಾವಿನ ಘಟನೆಯನ್ನು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕರ್ನಾಟಕ ರಾಜ್ಯ ಕಬ್ಬು ಬೆಳಗಾರರ ಸಂಘ, ರೈತ ಮುಖಂಡ ಕುರುಬೂರು ಶಾಂತಕುಮಾರ್ ಖಂಡಿಸಿದ್ದಾರೆ.

ಘಟನೆ ಸಂಬಂಧ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಮತ್ತು ಅವರ ಪುತ್ರನ ವಿರುದ್ಧ ಕೊಲೆ ಕೇಸ್ ದಾಖಲಿಸುವಂತೆ ಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ಹಾಗೂ ಹರಿಯಾಣ ಸರ್ಕಾರ ರೈತ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿವೆ. ಈ ಘಟನೆ ಖಂಡಿಸಿ ರಾಜ್ಯದಾದ್ಯಂತ ಹೋರಾಟ ಮಾಡುತ್ತೇವೆ. ಘಟನೆಗೆ ಸಂಬಂಧಪಟ್ಟಂತೆ ಸೂಕ್ತ ತನಿಖೆ ಆಗಬೇಕು. ಕೇಂದ್ರ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕುರುಬೂರು ಶಾಂತಕುಮಾರ್ ಅವರು, ಘಟನೆಗೆ ಘಟನೆಗೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅವರ ಪುತ್ರನೇ ನೇರ ಕಾರಣ ಎಂದು ಆರೋಪಿಸಿದ್ದಾರೆ. ಅಧಿಕಾರದ ಮದದಲ್ಲಿ ಬಿಜೆಪಿ ಗೂಂಡಾವರ್ತನೆ ಮಾಡುತ್ತಿದೆ. ಕೂಡಲೇ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ಗೂಂಡಾಕಾಯ್ದೆ ಅಡಿ ಸಚಿವರ ಪುತ್ರನನ್ನು ಬಂಧಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

About Author

Leave a Reply

Your email address will not be published. Required fields are marked *