ಅಸಂಘಟಿತ ಕಾರ್ಮಿಕ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ
1 min readಮೈಸೂರು,ಅ.5-ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ವತಿಯಿಂದ ಅಸಂಘಟಿತ ಕಾರ್ಮಿಕ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಲಾಯಿತು.
ನಗರದ ಕುವೆಂಪುನಗರದ ಚಿಕ್ಕಮ್ಮಾನಿಕೇನ ಕಲ್ಯಾಣ ಮಂಟಪದಲ್ಲಿ ನಗರಾಧ್ಯಕ್ಷ ಜೆ.ವಿನಯ್ ಕುಮಾರ್ ಅವರ ನೇತೃತ್ವದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ದಿನಸಿ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಂ.ಕೆ.ಸೋಮಶೇಖರ್, ಅಸಂಘಟಿತ ವರ್ಗದವರ ನೋವಿಗೆ ದನಿಯಾಗಿ ಪ್ರಾಮಾಣಿಕವಾಗಿ ದುಡಿಯುವ ಪಕ್ಷ ಇದ್ದರೆ ಅದು ಕಾಂಗ್ರೆಸ್ ಮಾತ್ರ. ನಮ್ಮ ಪಕ್ಷದ ಹಿರಿಯ ನಾಯಕರು, ರಾಜ್ಯಸಭಾ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಮಿಕರ ಪರವಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದರು. ಸಿದ್ದರಾಮಯ್ಯನವರು ಅವರ ಆಡಳಿತಾವಧಿಯಲ್ಲಿ ಅಸಂಘಟಿತ ಕಾರ್ಮಿಕರ ಪರ ಯೋಜನೆ ರೂಪಿಸಿ ನೆರವಾಗಿದ್ದರು. ಅದೇ ದಿಕ್ಕಿನಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಸದಾ ಅಸಂಘಟಿತ ವರ್ಗಗಳ ಪರ ನಿಲ್ಲಲಿದೆ. ಕೋವಿಡ್ ಸಂದರ್ಭದಲ್ಲಿ ಪ್ರತಿ ನಿತ್ಯವೂ ಒಂದಲ್ಲ ಒಂದು ಸೇವಾ ಕಾರ್ಯಗಳನ್ನು ಮಾಡುವ ಮುಖೇನಾ ಕಾಂಗ್ರೆಸ್ ಪಕ್ಷ ಜನರ ಮಧ್ಯೆ ಇದೆ. ಆ ನಿಟ್ಟಿನಲ್ಲಿ ಇಂದು ಸಹ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಅಸಂಘಟಿತ ಕಾರ್ಮಿಕ ವಿಭಾಗದ ವತಿಯಿಂದ ನೂರಕ್ಕೂ ಹೆಚ್ಚು ಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಸೋಮಶೇಖರ್, ನಗರ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಲತಾ ಚಿಕ್ಕಣ್ಣ, ಕೆಪಿಸಿಸಿ ಸದಸ್ಯೆ ವೀಣಾ, ಮಾಜಿ ಮಹಾಪೌರರಾದ ಟಿ.ಬಿ.ಚಿಕ್ಕಣ್ಣ, ಅಸಂಘಟಿತ ಕಾರ್ಮಿಕ ವಿಭಾಗದ ಸಾಮಾಜಿಕ ಜಾಲತಾಣ ಮೈಸೂರು ನಗರಾಧ್ಯಕ್ಷರಾದ ವಿನಯ್ ಕಣಗಾಲ್, ಗುಣಶೇಖರ್, ಚಂದ್ರಶೇಖರ್ ಪತಂಗೆ, ಶಾಂತರಾಮ್, ಯಶವಂತ್ ಉಪಸ್ಥಿತರಿದ್ದರು.