ಶಾಂತಿಯುತವಾಗಿ ಪುನೀತ್ ಅಂತ್ಯಸಂಸ್ಕಾರ ನಡೆಸಬೇಕಿದೆ- ಅಭಿಮಾನಿಗಳು ಸಹಕರಿಸಿ- ಸಿಎಂ!
1 min readಬೆಂಗಳೂರು : ಸಾರ್ವಜನಿಕರಿಗೆ ನಟ ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಕಂಠೀರವ ಕ್ರೀಡಾಂಗಣಕ್ಕೆ ಇಂದು ಬೆಳಿಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು ಕಂಠೀರವ ಸ್ಟುಡಿಯೋ ಆವರಣದಲ್ಲಿ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದೆ ಸಾರ್ವಜನಿಕರು ಹಾಗೂ ಅಭಿಮಾನಿಗಳು ಶಾಂತಿಯುತವಾಗಿ ಇರಬೇಕೆಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಮನವಿ ಮಾಡಿದರು.
- ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರ ಇಂದು ಅವರ ಮಗಳು ಆಗಮಿಸಿದ ನಂತರ ಕಂಠೀರವ ಸ್ಟುಡಿಯೋದಲ್ಲಿ ಅವರ ಕುಟುಂಬದವರು ಮತ್ತು ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಇದನ್ನು ಸುಗಮವಾಗಿ ನಡೆಸಲು ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿ ಯವರು ಕ್ರಮ ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಪುನೀತ್ ರಾಜ್ಕುಮಾರ್ ಜನಪ್ರಿಯ ನಟ. ಅವರ ಅಗಲಿಕೆ ನಮಗೆಲ್ಲರಿಗೂ ದುಃಖ ತಂದಿದೆ. ಅವರನ್ನು ಗೌರವದಿಂದ ಶಾಂತಿಯುತವಾಗಿ ನಾವು ಬೀಳ್ಕೊಡಬೇಕು. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಈ ಸಮಯ- ಈ ಸಂದರ್ಭದಲ್ಲಿ ನಾವು ಸಂಯಮ, ಜವಾಬ್ದಾರಿಯಿಂದ ವರ್ತಿಸಬೇಕಾಗಿದೆ. ಜನರು ಈ ವರೆಗೆ ಅತ್ಯುತ್ತಮವಾಗಿ ಸಹಕರಿಸಿದ್ದಾರೆ.
- ನಮ್ಮ ಜವಾಬ್ದಾರಿಯುತ ನಡವಳಿಕೆ ಡಾ. ರಾಜ್ ಕುಮಾರ್ ಹಾಗೂ ಪುನೀತ್ ಅವರಿಗೆ ಗೌರವ ಸಲ್ಲಿಸಿದಂತೆ. ಶಾಂತಿ, ಸ್ನೇಹದಿಂದ ಇರುವುದು ಕನ್ನಡಿಗರ ಸಂಸ್ಕೃತಿ. ಇದನ್ನು ನಾವು ಇಂದು ಮೆರೆಯಬೇಕಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.