ದೀಪಾವಳಿ, ಕನ್ನಡ ರಾಜ್ಯೋತ್ಸವಕ್ಕೆ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ!

1 min read

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗಬಹುದೆಂಬ ಭೀತಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವಕ್ಕೆ ಮಾರ್ಗಸೂಚಿ ಹೊರಡಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್‌‌ ಅವರು ಸುತ್ತೋಲೆ ಹೊರಡಿಸಿದ್ದು, ಕೊರೊನಾ ಸೋಂಕು ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯಾದ್ಯಂತ ಜನತೆ ದೀಪಾವಳಿ ಹಬ್ಬವನ್ನು ಸರಳವಾಗಿ ಆಚರಿಸಬೇಕು ಎಂದು ಮನವಿ ಮಾಡಿದ್ದಾರೆ.

ದೀಪಾವಳಿ ಆಚರಣೆಗೆ ಮಾರ್ಗಸೂಚಿ:

ಸವೋಚ್ಛ ನ್ಯಾಯಾಲಯದ ನಿರ್ದೇಶನಗಳಲ್ಲಿ ಅನುಮತಿಸಲಾದ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ರೀತಿಯಾದ ಇತರ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ ಹಾಗೂ ಬಳಸುವಂತಿಲ್ಲ. ಇದಕ್ಕೆ ಸಂಬಂಧಪಟ್ಟ ಇಲಾಖೆ ಹಾಗೂ ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಹಸಿರು ಪಟಾಕಿಯನ್ನು ಮಾತ್ರ ಮಾಡತಕ್ಕದ್ದು.

ನವೆಂಬರ್‌ 1-10ರವರೆಗೆ ಮಾತ್ರ ಹಸಿರು ಪಟಾಕಿಗಳ ಮಳಿಗೆಗೆಳನ್ನು ತೆರೆಯತಕ್ಕದ್ದು. ನಿಗದಿ ಪಡಿಸಿದ ಸ್ಥಳದಲ್ಲಿ ಮಾತ್ರವೇ ಪಟಾಕಿ ಅಂಗಡಿ ತೆರೆಯುವುದು. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸುವುದು.

ಕನ್ನಡ ರಾಜ್ಯೋತ್ಸವ ಆಚರಣೆಗೆ ಮಾರ್ಗಸೂಚಿಗಳು:

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 500 ಮಂದಿಗೆ ಮಾತ್ರವೇ ಪಾಲ್ಗೊಳ್ಳಲು ಅವಕಾಶ. ಸುರಕ್ಷಿತ ಅಂತರ, ಮಾಸ್ಕ್‌‌, ಸ್ಯಾನಿಟೈಸರ್‌ಗಳನ್ನು ಕಡ್ಡಾಯವಾಗಿ ಬಳಸಬೇಕು. ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆ, ವಿದ್ಯುತ್‌ ಇಲಾಖೆ, ಆರೋಗ್ಯ ಸಂಘ ಸಂಸ್ಥೆಗಳು, ಅಗ್ನಿಶಾಮಕ ಇಲಾಖೆ, ಮಾಲಿನ್ಯಕ್ಕೆ ಸಂಬಂಧಪಟ್ಟ ಇಲಾಖೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆದಿರಬೇಕು.

ರಾಜ್ಯೋತ್ಸವ ಆಚರಣೆಯ ವೇಳೆ ಹಮ್ಮಿಕೊಳ್ಳಲಾಗುವ ಸಾಂಸ್ಕೃತಿಕ, ಮನರಂಜನಾ ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ಕನಿಷ್ಠ ಅವಧಿಗೆ ಸೀಮಿತಗೊಳಿಸಬೇಕು. ಸಾಮಾಜಿಕ ಅಂತರವಿಲ್ಲದೇ ನಡೆಸುವ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗುತ್ತದೆ ಎಂದು ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *