ಕೃಷಿ ಕಾಯ್ದೆ ವಾಪಾಸ್ ಪಡೆದ ಮೋದಿ ಸರ್ಕಾರ.!
1 min readನವದೆಹಲಿ: ರೈತರ ಹೊರಾಟಕ್ಕೆ ಮಣಿದ ಬಿಜೆಪಿ ಸರ್ಕಾರ ಕೃಷಿ ಕಾಯ್ದೆ ಕಾನೂನನ್ನು ವಾಪಸ್ ಪಡೆದುಕೊಂಡಿದೆ. ರೈತರ ಸಮಸ್ಯೆಯ ಕುರಿತು ಮಾತನಾಡಿದ ಪ್ರಧಾನಿ, ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ.
- ದೇಶದಲ್ಲಿ 100ರಲ್ಲಿ 80 ಪ್ರತಿಶತ ರೈತರು ಸಣ್ಣ ಹಿಡುವಳಿ ರೈತರಾಗಿದ್ದು, 10 ಕೋಟಿಗಿಂತ ಹೆಚ್ಚು ಸಣ್ಣ ರೈತರಿದ್ದಾರೆ. ಅವರ ಸಮಸ್ಯೆಗಳನ್ನು ನಾನು ಅರಿತಿದ್ದೇನೆ. ಅದನ್ನು ಬಗೆಹರಿಸಲು ಪ್ರಯತ್ನ ಮಾಡಲಾಗುತ್ತಿದ್ದು, ಬೀಜ, ವಿಮೆ, ಮಾರುಕಟ್ಟೆ, ಉಳಿತಾಯಕ್ಕೆ ಯೋಜನೆಗಳಿಗಾಗಿ ರೈತರಿಗೆ ಫಸಲ್ ಬಿಮಾ, ಪೆನ್ಷನ್ ಯೋಜನೆ ಜಾರಿಗೆ ತಂದಿದ್ದೇವೆ.
ಕೃಷಿ ಮಾರುಕಟ್ಟೆ ಆಧುನೀಕರಣಕ್ಕೆ ಕೋಟ್ಯಂತರ ರೂ. ಖರ್ಚು ಮಾಡಲಾಗುತ್ತಿದೆ. ರೈತರು ಈಗ ಎಲ್ಲಿ ಬೇಕಾದರೂ ತಮ್ಮ ಬೆಳೆ ಮಾರಬಹುದು. ಕೃಷಿ ಬಜೆಟ್ ಮೊದಲಿಗಿಂತ 5 ಪಟ್ಟು ಹೆಚ್ಚಿಸಿದ್ದೇವೆ. ರೈತರಿಗೆ 22 ಕೋಟಿ ಸಾಯಿಲ್ ಹೆಲ್ತ್ ಕಾರ್ಡ್ ನೀಡಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.