ಮೂರು ಕೃಷಿ ಕಾಯ್ದೆ ರದ್ದುಗೊಳಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
1 min readನವದೆಹಲಿ: ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಮಸೂದೆಯನ್ನು ಕೇಂದ್ರ ಸಚಿವ ಸಂಪುಟ ಬುಧವಾರ ಅಂಗೀಕರಿಸಿದೆ. ಇಂದು ಬೆಳಗ್ಗೆ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ರದ್ದು ಮಸೂದೆ 2021 ಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಮಸೂದೆಯು ಇದೀಗ ಕೇಂದ್ರ ಸಂಪುಟ ಸಭೆಯಲ್ಲಿ ಅಂಗೀಕಾರವಾಗಿದ್ದು, ಇನ್ನು ನವೆಂಬರ್ 29ರಂದು ಆರಂಭವಾಗಲಿರುವ ಚಳಿಗಾಲ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಿ ಅಂಗೀಕಾರ ಪಡೆದುಕೊಳ್ಳಲಾಗುತ್ತದೆ.
ಸುಮಾರು ಒಂದು ವರ್ಷದಿಂದ ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ನವೆಂಬರ್ 29 ರಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾಯ್ದೆಯನ್ನು ಔಪಚಾರಿಕವಾಗಿ ರದ್ದುಗೊಳಿಸುವವರೆಗೆ ಪ್ರತಿಭಟನೆ ಮುಂದುವರೆಯಲಿದೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಕಳೆದ ನವೆಂಬರ್ 19ರಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರ್ಕಾರದಿಂದ ಜಾರಿಗೆ ತರಲಾಗಿರುವ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದರು.