ಮುನ್ನೆಚ್ಚರಿಕಾ ಡೋಸ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ರಾಮದಾಸ್
1 min readಮೈಸೂರು: ಇಂದು ಬೆಳಗ್ಗೆ ಮಾನ್ಯ ಶಾಸಕ ಎಸ್.ಎ.ರಾಮದಾಸ್ ಅವರು ಇಂದು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಹಿರಿಯ ನಾಗರಿಕರಿಗೆ ಕೋವಿಡ್ ಮುನ್ನೆಚ್ಚರಿಕಾ ಡೋಸ್ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಎಸ್.ಎಂ.ಟಿ ಆಸ್ಪತ್ರೆಯಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ನನ್ನೆಲ್ಲ ಹಿರಿಯ ನಾಗರಿಕ ಬಂಧಿಗಳಿಗೆ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ವಂದನೆಗಳು. ನಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಕಳೆದ ತಿಂಗಳು ಬೂಸ್ಟರ್ ಲಸಿಕೆ ಘೋಷಣೆ ಮಾಡಿದರು, ಈಗಾಗಲೇ ನಮ್ಮ ಕ್ಷೇತ್ರದಲ್ಲಿ 21 ಸಾವಿರ ಮಕ್ಕಳು 15 ರಿಂದ 18 ವರ್ಷದ ಮಕ್ಕಳಿದ್ದಾರೆ ಅದರಲ್ಲಿ ಈಗಾಗಲೇ 19 ಸಾವಿರ ಮಕ್ಕಳಿಗೆ ವ್ಯಾಕ್ಸಿನ್ ನೀಡಲಾಗಿದೆ.
ಇಂದು ಹಿರಿಯ ನಾಗರಿಕರಿಗೆ ವ್ಯಾಕ್ಸಿನೇಷನ್ ಅನ್ನು ನೀಡಲು ಪ್ರಾರಂಭ ಮಾಡಿದ್ದೇವೆ, ಸುಮಾರು 4 ಲಕ್ಷ ಜನರು ನಮ್ಮ ಮೈಸೂರು ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟವರಿದ್ದಾರೆ. ಎಲ್ಲಾ ಅರ್ಹರೂ ಕೂಡಾ ಬೂಸ್ಟರ್ ಡೋಸ್ ಅನ್ನು ಪಡೆಯಬೇಕು ಜೊತೆಗೆ ಸಾಮಾಜಿಕ ಅಂತರ ಪಾಲಿಸಿಕೊಂಡು, ಮಾಸ್ಕ್ ಧರಿಸಿ ಕೋವಿಡ್ ನಿಯಮವನ್ನು ಪಾಲಿಸೋಣ ಎಂದರು.
ಸದರಿ ಕಾರ್ಯಕ್ರಮದಲ್ಲಿ ಮೂಡಾ ಅಧ್ಯಕ್ಷರಾದ ಹೆಚ್ ವಿ ರಾಜೀವ್ , ಡಿ.ಹೆಚ್.ಓ ಡಾ.ಕೆ ಹೆಚ್ ಪ್ರಸಾದ್, ಆರ್ ಸಿ ಹೆಚ್ ಓ ಡಾ. ಜಯಂತ್, ಡಿ.ಎಸ್.ಓ ಡಾ. ಶಿವಪ್ರಸಾದ್ ಸೇರಿದಂತೆ ವಿವಿಧ ವೈದ್ಯಾಧಿಕಾರಿಗಳು ಹಾಜರಿದ್ದರು.