ಪೊಲೀಸ್ ಠಾಣೆಗೆ ಜಡ್ಜ್ ಭೇಟಿ ವೇಳೆ ಬಾಗಿಲು ಮುಚ್ಚಿದ್ದ ಇನ್ಸ್ಪೆಕ್ಟರ್ ಅಮಾನತು
1 min readಚಾಮರಾಜನಗರ,ಜ.13- ನ್ಯಾಯಾಧೀಶರು ನಗರದ ಪೊಲೀಸ್ ಠಾಣೆಗೆ ಭೇಟಿ ನೀಡಿದ ವೇಳೆ ಠಾಣೆಯ ಬಾಗಿಲು ಮುಚ್ಚಿದ್ದ ಇನ್ಸ್ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ.
ಚಾಮರಾಜನಗರ ಸಿಇಎನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ ಅಮಾನತುಗೊಂಡಿದ್ದಾರೆ.
ಜ. 3 ರಂದು ಚಾಮರಾಜನಗರ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಗಣಪತಿ ಗುರುಸಿದ್ದ ಬಾದಾಮಿಯವರು ಸಿಇಎನ್ (ಸೈಬರ್, ಎಕಾನಾಮಿಕ್ ಅಂಡ್ ನಾರ್ಕೋಟಿಕ್) ಠಾಣೆಗೆ ದಿಢೀರ್ ಭೇಟಿ ನೀಡಿದ್ದರು. ಈ ವೇಳೆ ಇನ್ಸ್ಪೆಕ್ಟರ್ ಪೊಲೀಸ್ ಠಾಣೆಯ ಬಾಗಿಲು ಹಾಕಿಕೊಂಡಿದ್ದಾರೆ. ಆಗ ನ್ಯಾಯಾಧೀಶರು ದೂರು ಕೊಡಲು ಬಂದವರು ಏನು ಮಾಡಬೇಕು ಎಂದು ಪ್ರಶ್ನಿಸಿ ಎಸ್ಪಿಗೆ ಪತ್ರ ಬರೆದಿದ್ದರು.
ನ್ಯಾಯಾಧೀಶರ ಪತ್ರಕ್ಕೆ ಕೂಡಲೇ ಕ್ರಮ ತೆಗೆದುಕೊಂಡ ಎಸ್ಪಿ ದಿವ್ಯಾ ಸಾರಾ ಥಾಮಸ್ರವರು ಐಜಿಯ ಅನುಮತಿ ಪಡೆದು ನಂಜಪ್ಪ ಅವರನ್ನು ಅಮಾನತುಗೊಳಿಸಿದ್ದಾರೆ.