ಭಾರತದ ಲಸಿಕಾ ಅಭಿಯಾನಕ್ಕೆ ಒಂದು ವರ್ಷ: ಕೊರೊನಾ ವಿರುದ್ದದ ಹೋರಾಟಕ್ಕೆ ಶಕ್ತಿ ನೀಡಿದ ಲಸಿಕೆ
1 min readನವದೆಹಲಿ,ಜ.17-ಮಹಾಮಾರಿ ಕೋವಿಡ್ ಸೋಂಕಿನಿಂದ ಇಡೀ ದೇಶವೇ ತತ್ತರಿಸಿ ಹೋಗಿದ್ದ ಸಂದರ್ಭದಲ್ಲಿ ಆಶಾಕಿರಣವಾಗಿ ಸಿಕ್ಕಿದ್ದು ಕೋವಿಡ್ ಲಸಿಕೆ. ಇದು ನಮ್ಮ ಕೊರೊನಾ ವಿರುದ್ಧದ ಹೋರಾಟಕ್ಕೆ ಶಕ್ತಿ ನೀಡಿತು.
ಭಾರತದ ಕೋವಿಡ್ ಲಸಿಕಾ ಅಭಿಯಾನ ಪ್ರಾರಂಭವಾಗಿ ಇಂದಿಗೆ ಒಂದು ವರ್ಷ ಪೂರೈಸಿದೆ. ಇದು ಭಾರತ ಶಕ್ತಿಯನ್ನು ಪ್ರತಿನಿಧಿಸುತ್ತದೆ ಎಂದು ಕೇಂದ್ರ ಸರ್ಕಾರ ಸಂತಸ ವ್ಯಕ್ತಪಡಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಲಸಿಕೀಕರಣದಲ್ಲಿ ಭಾಗಿಯಾದ ಪ್ರತಿಯೊಬ್ಬ ವ್ಯಕ್ತಿಯನ್ನು ನಾನು ಅಭಿನಂದಿಸುತ್ತೇನೆ. ನಮ್ಮ ಲಸಿಕೆ ಕಾರ್ಯಕ್ರಮವು ಕೊರೊನಾ ವಿರುದ್ಧದ ಹೋರಾಟಕ್ಕೆ ಹೆಚ್ಚಿನ ಶಕ್ತಿ ನೀಡಿದೆ. ಇದು ಜೀವ ಉಳಿಸಲು ಮತ್ತು ಜೀವನೋಪಾಯವನ್ನು ರಕ್ಷಿಸಲು ಕಾರಣವಾಗಿದೆ ಎಂದಿದ್ದಾರೆ.
ಲಸಿಕಾಕರಣದ ಮುಖ್ಯಾಂಶಗಳು:
ದೇಶದಲ್ಲಿ 156.76 ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ.
ಭಾರತದಲ್ಲೇ ತಯಾರಾದ ಲಸಿಕೆಗಳಿಗೆ ತುರ್ತು ಬಳಕೆಗೆ ಅನುಮತಿ.
ಶೇ.92ಕ್ಕಿಂತ ಹೆಚ್ಚು ಜನ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿದ್ದಾರೆ.
ಶೇ.68ರಷ್ಟು ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. ಕೇವಲ 9 ತಿಂಗಳಲ್ಲಿ 100 ಕೋಟಿ ಡೋಸ್, ಒಂದೇ ದಿನ 2.51 ಕೋಟಿ ಡೋಸ್ ನೀಡಿದ ಹೆಗ್ಗಳಿಕೆ. 15 ದಿನಗಳಲ್ಲಿ 3.51 ಕೋಟಿ ಮಕ್ಕಳಿಗೆ ಲಸಿಕೆ. 43.19 ಲಕ್ಷ ಮಂದಿಗೆ ಬೂಸ್ಟರ್ ಡೋಸ್. 6 ಲಕ್ಷ ಕೈದಿಗಳಿಗೆ ಲಸಿಕೆ ನೀಡಿದ ಭಾರತ. 76 ಕೋಟಿ ಮಹಿಳೆಯರಿಗೆ ಲಸಿಕೆ.
ಐ ಡ್ರೋನ್ ಮೂಲಕ ದೂರದ ಪ್ರದೇಶಗಳಿಗೆ ಲಸಿಕೆ ವಿತರಣೆ. ಬುಡಕಟ್ಟು ಪ್ರದೇಶಗಳಿಗೆ 11 ಕೋಟಿ ಡೋಸ್ ಲಸಿಕೆ. ಆರೋಗ್ಯ ಸೇತು ಆಪ್ ಮೂಲಕ ಲಸಿಕೆ ಪಡೆದವರಿಗೆ ಆನ್ ಲೈನ್ ಪ್ರಮಾಣ ಪತ್ರ ನೀಡುವ ಮೂಲಕ ಭಾರತದ ಲಸಿಕೆ ಅಭಿಯಾನ ಯಶಸ್ವಿಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.