ಜ.31 ರವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ
1 min readಬೆಂಗಳೂರು,ಜ.18-ಕೋವಿಡ್ 3ನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಈಗಾಗಲೇ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಕೆಲ ನಿಯಮಗಳನ್ನು ಕೈಗೊಳ್ಳಲಾಗಿದೆ. ಆಗಿದ್ದರೂ ಕೋವಿಡ್ ಸೋಂಕಿನ ಪ್ರಕರಣ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಜಾರಿಯಲ್ಲಿರುವ ಸೆಕ್ಷನ್ 144 ಅಡಿ ನಿಷೇಧಾಜ್ಞೆಯನ್ನು ಜ.31ರವರೆಗೂ ವಿಸ್ತರಿಸಲಾಗಿದೆ.
ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ನಗರದಲ್ಲಿ ಜನಸಂಚಾರ ದಟ್ಟಣೆ ತಡೆಗೆ ಆಯುಕ್ತರು ಜ.6ರಿಂದ ಜ.19ರವರೆಗೂ 144 ಸೆಕ್ಷನ್ ಜಾರಿಗೊಳಿಸಿದ್ದರು. ಇದೀಗ ಜ.31ರವರೆಗೂ ವಿಸ್ತರಿಸಲಾಗಿದೆ.
ಈ ಅವಧಿಯಲ್ಲಿ ಪ್ರತಿಭಟನೆ, ರ್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕಾನೂನು ನಿಯಮ ಉಲ್ಲಂಘನೆ ಕಂಡು ಬಂದರೆ ಅಂತವರ ವಿರುದ್ಧ ಐಪಿಸಿ ಸೆಕ್ಷನ್ 188, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರ ಎಚ್ಚರಿಕೆ.