ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಶಾಲಾ ಶಿಕ್ಷಕ ಸೇವೆಯಿಂದ ವಜಾ: ಪೊಲೀಸರಿಂದ ವಿಚಾರಣೆ
1 min readಮೈಸೂರು,ಜ.30-ವಿದ್ಯಾರ್ಥಿನಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದ ಶಾಲಾ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಶಾಲೆಯಲ್ಲಿ ವಿದ್ಯಾರ್ಥಿನಿ ಜೊತೆಗೆ ಮುಖ್ಯ ಶಿಕ್ಷಕ ಅಸಭ್ಯವಾಗಿ ವರ್ತಿಸಿದ್ದ. ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಪೋಲಿ ಶಿಕ್ಷಕನ ವರ್ತನೆಗೆ ವ್ಯಾಪಕ ಅಕ್ರೋಶ ವ್ಯಕ್ತವಾಗಿತ್ತು.
ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ಘಟನೆ ನಡೆದಿತ್ತು. ಇದೀಗ ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದ ಮುಖ್ಯ ಶಿಕ್ಷಕನನ್ನು ಸೇವೆಯಿಂದ ವಜಾ ಮಾಡಲಾಗಿದೆ.
ಅಲ್ಲದೆ, ಘಟನೆ ಸಂಬಂಧ ಶಿಕ್ಷಣಾಧಿಕಾರಿ ಅವರು ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯದ ಕುರಿತು ಮುಖ್ಯೋಪಾಧ್ಯಾಯರ ಮೇಲೆ ದೂರು ದಾಖಲಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಹೆಚ್.ಡಿ ಕೋಟೆ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನನ್ವಯ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಆರೋಪಿ ಶಿಕ್ಷಕನನ್ನು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಂಡ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.