ದೇಶದಲ್ಲಿ 2022-23 ರೊಳಗೆ 5ಜಿ ಸೇವೆ ಆರಂಭವಾಗಲಿದೆ: ನಿರ್ಮಲಾ ಸೀತಾರಾಮನ್
1 min readನವದೆಹಲಿ,ಫೆ.1-ದೇಶದಲ್ಲಿ 2022-23 ರೊಳಗೆ 5ಜಿ ಸೇವೆ ಆರಂಭವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬಜೆಟ್ ನಲ್ಲಿ ಪ್ರಸಕ್ತ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು ಶೇ.9.2 ಎಂದು ಅಂದಾಜಿಸಲಾಗಿದೆ. ಎಲ್ಲಾ ದೊಡ್ಡ ಆರ್ಥಿಕತೆಗಳಲ್ಲೇ ಇದು ಅತ್ಯಧಿಕವಾಗಿದೆ. ಆರೋಗ್ಯ ಮೂಲಸೌಕರ್ಯಗಳ ಬಲವರ್ಧನೆ, ಲಸಿಕೆ ಕಾರ್ಯಕ್ರಮದ ತ್ವರಿತ ಅನುಷ್ಠಾನ ಇದಕ್ಕೆ ಕಾರಣ ಎಂದಿದ್ದಾರೆ.
ಪ್ರಧಾನ ಮಂತ್ರಿ ಗತಿ ಶಕ್ತಿಯು ಆರ್ಥಿಕತೆಯನ್ನು ಮುಂದಕ್ಕೆ ಕೊಂಡೊಯ್ಯಲಿದೆ ಮತ್ತು ಯುವಕರಿಗೆ ಹೆಚ್ಚಿನ ಉದ್ಯೋಗಗಳು ಮತ್ತು ಅವಕಾಶಗಳನ್ನು ಸೃಷ್ಟಿಸಲಿದೆ. 14 ವಲಯಗಳಲ್ಲಿ ಜಾರಿಗೆ ತಂದಿರುವ ಪಿಎಲ್ಐ ಯೋಜನೆಗಳು 60 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಮತ್ತು 30 ಲಕ್ಷ ಕೋಟಿ ರೂ. ಹೆಚ್ಚುವರಿ ಹೊಸ ಉತ್ಪಾದನೆ ಸಾಧಿಸುವ ಸಾಮರ್ಥ್ಯ ಹೊಂದಿವೆ
ಮುಂದಿನ 3 ವರ್ಷಗಳಲ್ಲಿ 400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳನ್ನು ತಯಾರಿಸಲಾಗುವುದು. 2022-23ರಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲವನ್ನು 25,000 ಕಿ.ಮೀ ವಿಸ್ತರಿಸಲಾಗುವುದು. ಬ್ಯಾಂಕ್ ಗಳು ಮತ್ತು ಅಂಚೆ ಕಚೇರಿಗಳ ನಡುವೆ ಹಣಕಾಸು ವರ್ಗಾವಣೆಯನ್ನು ಸರಳಗೊಳಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ.