ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ

1 min read

ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ

ಮೈಸೂರು, ಮಾರ್ಚ್ 12, ಶನಿವಾರ

ರಂಗಾಯಣದಲ್ಲಿ ಮಾ.20ರವರೆಗೆ ನಡೆಯಲಿರುವ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಶನಿವಾರ ಚಾಲನೆ ನೀಡಿದರು.

ತಾಯಿ ಶೀರ್ಷಿಕೆಯಲ್ಲಿ ಹಮ್ಮಿಕೊಂಡಿರುವ ರಂಗೋತ್ಸವ ಕಾರ್ಯಕ್ರಮ ಬಹಳ ಉತ್ತಮವಾಗಿದೆ. 10 ದಿನಗಳ ಕಾಲ ನಾನಾ ನಾಟಕಗಳು, ಕಲಾ ಪ್ರದರ್ಶನ ವೀಕ್ಷಿಸುವ ಅವಕಾಶ ಸಿಕ್ಕಿದೆ ಎಂದು ಹೇಳಿದರು.

ಉಕ್ರೇನ್ ನಲ್ಲಿ ಸಿಲುಕಿದ್ದ ತಮ್ಮ ಮಕ್ಕಳು ತಾಯ್ನಾಡಿಗೆ ಮರಳಿದಾಗ ಆ ತಾಯಂದಿರ ಸಂತೋಷಕ್ಕೆ ಪಾರವೇ ಇರಲಿಲ್ಲ. ತಾಯಿ ಎಂಬ ಹೆಸರಿನಲ್ಲಿ ನಡೆಯುತ್ತಿರುವ ರಂಗೋತ್ಸವ ಕಾರ್ಯಕ್ರಮದ ಬಗ್ಗೆ ಎಷ್ಟು ಹೇಳಿದರು ಸಾಲದು ಎಂದು ಬಣ್ಣಿಸಿದರು.

ಇದಕ್ಕೂ ಮುನ್ನಾ ಕರಕುಶಲ ಮೇಳಕ್ಕೆ ಚಾಲನೆ ನೀಡಿದರು. ಈ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತೆ ವೃಕ್ಷಮಾತೆ ತುಳಸೀಗೌಡ, ಶಾಸಕ ನಾಗೇಂದ್ರ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ಅಪ್ಪಣ್ಣ, ಮೂಡಾ ಅಧ್ಯಕ್ಷ ಎಚ್.ವಿ.ರಾಜೀವ್, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಎನ್.ವಿ.ಪಣೀಶ್,
ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೃಷ್ಣಪ್ಪ ಗೌಡ,ಕಾಡಾ ಅಧ್ಯಕ್ಷ ಶಿವಲಿಂಗಯ್ಯ, ನಟಿ ಮಾಳವೀಕಾ, ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *