ಕೋವಿಡ್ 2ನೇ ಅಲೆ: ಎಚ್ಚರಿಕೆಯಿಂದ ಇರಲು ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮನವಿ
1 min readಮೈಸೂರು: ಕೋವಿಡ್ 2ನೇ ಅಲೆಯು ಭಾರತದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು ಎಲ್ಲರೂ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಚ್ಚರಿಕೆಯಿಂದಿರುವಂತೆ ಮೈಸೂರಿನ ಅವಧೂತ ದತ್ತ ಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಮನವಿ ಮಾಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಅನಗತ್ಯವಾಗಿ ರಸ್ತೆಗಳಲ್ಲಿ ತಿರುಗಾಡಿದಂತೆ ಸಲಹೆ ನೀಡಿದ್ದಾರೆ. ಮನೆಯಿಂದ ಹೊರ ಹೋಗುವ ಸಮಯದಲ್ಲಿ ಮಾಸ್ಕ್ ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸುವಂತೆಯು ಶ್ರೀಗಳು ಸಲಹೆ ನೀಡಿದ್ದಾರೆ. 18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಹಾಕಿಸಿ ಕೊಳ್ಳುವಂತೆ ಶ್ರೀಗಳು ತಿಳಿಸಿದ್ದಾರೆ.