ನೀಲಕಂಠೇಶ್ವರ ಶಾಲೆಯ ಸಂಸ್ಥಾಪಕರ ಸ್ಮರಣ ಸಂಚಿಕೆ ಬಿಡುಗಡೆ!

1 min read

ನಂಜನಗೂಡು :


ಶಿಕ್ಷಣ ತಜ್ಞರು ಹಾಗೂ ನಂಜನ ಗೂಡಿನ ಪ್ರತಿಷ್ಠಿತ ನೀಲಕಂಠೇಶ್ವರ ಶಾಲೆಯ ಸಂಸ್ಥಾಪಕರಾದ ಶ್ರೀಯುತ ಕೆಬಿ ಸೋಮಶೇಖರ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು

ಪಟ್ಟಣದ ಜೆಎಸ್ಎಸ್ ಬಾಲಿಕಾ ಪ್ರೌಢಶಾಲ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವನೂರು ಶ್ರೀ ಗುರುಮಲ್ಲೇಶ್ವರ ತ್ರಿವಿಧ ದಾಸೋಹ ಮಠ ಧ್ಯಕ್ಷರಾದ ಶ್ರೀ ಮಹಾಂತ ಸ್ವಾಮಿಗಳು ದಿವ್ಯ ಸಾನಿಧ್ಯವಹಿಸಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.

ಕಾರ್ಯಕ್ರಮ ಕುರಿತು ನಿವೃತ್ತ ಪ್ರಾಂಶುಪಾಲರಾದ ಶ್ರೀ ಸದಾಶಿವ ಮೂರ್ತಿ ಮಾತನಾಡಿ ಕೆಬಿ ಸೋಮಶೇಖರ್ ಅವರು ಸರ್ಕಾರಿ ಶಾಲೆ ಶಿಕ್ಷಕರಾಗಿ ಪ್ರಾಂಶುಪಾಲರಾಗಿ ನಿವೃತ್ತರಾದಮೇಲೆ ಜೆಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿ ತಮ್ಮ ಇಳಿವಯಸ್ಸಿನಲ್ಲೂ ನೀಲಕಂಠೇಶ್ವರ ಎಂಬ ಶಿಕ್ಷಣ ಸಂಸ್ಥೆ ತೆರೆದು ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಮೂಲಕ ತಮ್ಮ ಜೀವನದುದ್ದಕ್ಕೂ ಕ್ರಿಯಾಶೀಲ ವ್ಯಕ್ತಿಯಾಗಿದ್ದರು ಎಂದು ಅವರ ಕಾರ್ಯವೈಖರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕುಮಾರ್ ಪ್ರಾಸ್ತಾವಿಕ ವಾಗಿ ಮಾತನಾಡಿ ಸೋಮಶೇಖರ್ ಅವರು ನಂಜನಗೂಡಿಗೆ ನೀಡಿರುವ ಕೊಡುಗೆ ಅಪಾರವಾಗಿದ್ದು ಅವರ ಕನಸಿನ ಕೂಸು ನೀಲಕಂಠೇಶ್ವರ ಶಿಕ್ಷಣ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆಯುತ್ತಿದೆ ಇದಕ್ಕೆಲ್ಲ ಅವರ ಪ್ರೇರಣೆಯೇ ಕಾರಣ ಎಂದು ಅವರನ್ನು ನೆನಪಿಸುತ್ತಾ ಕಣ್ಣೀರಿಟ್ಟರು

ಇದೇ ಸಂದರ್ಭ ಕಳೆದ ಮತ್ತು ಈ ಸಾಲಿನಲ್ಲಿ ಎಸೆಸೆಲ್ಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವೇದಿಕೆ ಮೇಲಿನ ಗಣ್ಯರು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು ಹಾಗೂ ವೇದಿಕೆ ಮೇಲಿನ ಗಣ್ಯರನ್ನು ಸಹ ಶಿಕ್ಷಣ ಸಂಸ್ಥೆ ವತಿಯಿಂದ ಗೌರವಿಸಲಾಯಿತು.

ದಿವ್ಯ ಸಾನಿಧ್ಯ ವಹಿಸಿದ್ದ ದೇವನೂರು ಗುರುಮಲ್ಲೇಶ್ವರ ಮಠಾ ಧ್ಯಕ್ಷರಾದ ಶ್ರೀ ಮಹಾಂತ ಸ್ವಾಮಿಗಳು ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಚುಂಚನಹಳ್ಳಿ ಶ್ರೀಗಳಾದ ಶ್ರೀ ಚನ್ನಬಸವ ಸ್ವಾಮೀಜಿ ಗುತ್ತಿಗೆದಾರ ಪದ್ಮನಾಭರಾವ್ ಪುರಸಭೆ ಮಾಜಿ ಅಧ್ಯಕ್ಷರುಗಳಾದ ನರಸಿಂಹಸ್ವಾಮಿ ಮಹದೇವಸ್ವಾಮಿ ನಿವೃತ್ತ ಪ್ರಾಂಶುಪಾಲರಾದ ಸುಬ್ಬಣ್ಣ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಅರುಣೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *