ರಾಷ್ಟ್ರಪತಿಗಳಿಂದ ಈ ಬಾರಿ ದಸರಾ ಉದ್ಘಾಟನೆ!

1 min read

ವಿಶ್ವವಿಖ್ಯಾತ ಮೈಸೂರು ದಸರಾ 2022

ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು. ದಸರಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಪತಿಯಿಂದ ಉದ್ಘಾಟನೆ. ಇದುವರೆಗೂ ಅಧಿಕಾರೇತರರು ದಸರಾ ಉದ್ಘಾಟನೆ ಮಾಡುತ್ತಿದ್ದರು. ಸಿಎಂ ಬೊಮ್ಮಾಯಿ ಅವರಿಂದ ಮಾಹಿತಿ.

ಅಧಿಕೃತ ಮಾಹಿತಿ ನೀಡಿದ ರಾಷ್ಟ್ರಪತಿ ಭವನ :-

ಸೆಪ್ಟೆಂಬರ್ 26 ರಿಂದ ಪ್ರಾರಂಭವಾಗಲಿರುವ ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಮ್ಮತಿಸಿದ್ದಾರೆ. ಇದಕ್ಕು ಮೊದಲು ರಾಷ್ಟ್ರಪತಿಯವರನ್ನು ಆಹ್ವಾನಿಸಿ ಸೆಪ್ಟೆಂಬರ್ 6 ರಂದು ಮುಖ್ಯಮಂತ್ರಿಯವರು ಪತ್ರ ಬರೆದಿದ್ದರು. ಇದಕ್ಕೆ ರಾಷ್ಟ್ರಪತಿಯವರು ಸಮ್ಮತಿ ಸೂಚಿಸಿರುವುದಾಗಿ ರಾಷ್ಟ್ರಪತಿ ಭವನದ ಅಧಿಕಾರಿಗಳು ಮುಖ್ಯಮಂತ್ರಿ ಕಚೇರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಅಧಿಕೃತವಾಗಿ ಸಿಎಂ ಬೊಮ್ಮಾಯಿ ಅವರು ಈ ವಿಚಾರ ಸ್ಪಷ್ಟಪಡಿಸಿದ್ದಾರೆ.

About Author

Leave a Reply

Your email address will not be published. Required fields are marked *