ತವರಿನಲ್ಲಿ ಸಿಎಂ ಸಿದ್ದರಾಮಯ್ಯ’ ನಾಳೆಯಿಂದ ಶಕ್ತಿ ಯೋಜನೆ ಜಾರಿ!

1 min read

ಮೈಸೂರಿನ ಸುತ್ತೂರು ಹೆಲಿಪ್ಯಾಡ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ನಾಳೆಯಿಂದ ಮಹಿಳೆಯರ ಉಚಿತ ಸಾರಿಗೆ ಪ್ರಯಾಣ ಯೋಜನೆ ಜಾರಿ ಆಗುತ್ತದೆ ಹಾಗೂ ರಾಜ್ಯದ ಎಲ್ಲ ಮಹಿಳೆಯರಿಗೆ ವೋಲ್ವೋ, ಎಸಿ ಬಸ್ ಬಿಟ್ಟು ಇತರೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದರು.

ನಾಳೆ ಮಧ್ಯಾಹ್ನ 1 ಗಂಟೆಯಿಂದ‌ ಯೋಜನೆ ಚಾಲನೆ ಆಗುವುದು. ಈ ಸಂದರ್ಭದಲ್ಲಿ ವಿಧಾನಸೌಧದ ಬಳಿ ನಾನು, ಡಿಸಿಎಂ ಹಾಗೂ ಸಾರಿಗೆ ಮಂತ್ರಿ ಜಾರಿ ಮಾಡುತ್ತೇವೆ ಹಾಗೂ ಜಿಲ್ಲಾ ಕೇಂದ್ರದಲ್ಲಿ ಏಕಕಾಲಕ್ಕೆ ಜಾರಿಯಾಗುತ್ತದೆ ಎಂದು ಅವರು ತಿಳಿಸಿದರು.

ರಾಜ್ಯದ ಜಿಎಸ್‌ಟಿ ಪಾಲಿಗೆ ಒತ್ತಾಯ ವಿಚಾರವಾಗಿ ನ್ಯಾಯಯುತವಾಗಿ ಕೇಂದ್ರದಿಂದ ನಮಗೆ ಬೇಕಾದ ಹಣವನ್ನ ಒತ್ತಾಯ ಪೂರ್ವಕವಾಗಿ ಕೇಳುತ್ತೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮಳೆ ಕೊರತೆ ಆತಂಕ ವಿಚಾರವಾಗಿ ಸೋಮವಾರ ಕುಡಿಯುವ ನೀರಿನ ಸಂಬಂಧ ಅಧಿಕಾರಿಗಳ ಸಭೆ ಕರೆಯಲಾಗಿದೆ.
ಮಳೆ ಸಮಸ್ಯೆ ಇರುವ ಜಿಲ್ಲಾಧಿಕಾರಿಗಳ ಜೊತೆ ಕೂಡ ವೀಡಿಯೋ ಕಾನ್ಫರೆನ್ಸ್ ಮಾಡಿ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಜುಲೈ 1 ರಿಂದ ಗುಲ್ಬರ್ಗದಲ್ಲಿ ಗೃಹಜ್ಯೋತಿ ಲಾಂಚ್ ಆಗುತ್ತೆ.
ಜುಲೈ 1 ರಂದೇ ಹತ್ತು ಕೆಜಿ ಆಹಾರ ಧಾನ್ಯ ಕೊಡುವ ಯೋಜನೆ ಮೈಸೂರಿನಲ್ಲಿ ಚಾಲನೆ.
ಜುಲೈ 16 ರಿಂದ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಆಗುತ್ತೆ.
2022-23ರಲ್ಲಿ ಪಾಸ್ ಆದ ಪದವಿ, ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳು 24 ತಿಂಗಳಲ್ಲಿ ಕೆಲಸ ಸಿಗದಿದ್ದರೆ ಹಣ.
ಮಧ್ಯೆ ಸರ್ಕಾರಿ ಅಥವಾ ಖಾಸಗಿ ಕೆಲಸ ಸಿಕ್ಕರೆ ಹಣ ಸಿಗುವುದಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನೆ ಸಚಿವರಾದ ಕೆ.ವೆಂಕಟೇಶ್ ಹಾಗೂ ಇತರೆ ಗಣ್ಯರು ಉಪಸ್ಧಿತರಿದ್ದರು.

About Author

Leave a Reply

Your email address will not be published. Required fields are marked *