ನಾಗಭೂಷಣ್ ಕಾರು ಅಪಘಾತ ಡಿಸಿಪಿ ಹೇಳಿದ್ದೇನು ?
1 min readನಟ ನಾಗಭೂಷಣ್ ಕಾರು ಅಪಘಾತ ಪ್ರಕರಣ ಡಿಸಿಪಿ ಶಿವಪ್ರಕಾಶ್ ದೇವರಾಜ್ ಹೇಳಿಕೆ
ನಿನ್ನೆ ರಾತ್ರಿ ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಮಹಿಳೆಯೋರ್ವರು ಸಾವಿಗೀಡಾಗಿದ್ದು ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ನಂತರ ನಟ ನಾಗಭೂಷಣ್ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಶರಣಾಗಿದ್ದಾರೆ ..ಈ ಬಗ್ಗೆ ಸಂಚಾರ ದಕ್ಷಿಣ ಡಿಸಿಪಿ ಶಿವಪ್ರಕಾಶ್ ದೇವರಾಜ್ ಹೇಳಿಕೆ ಕೊಟ್ಟಿದ್ದಾರೆ …
30-09-23 ರಂದು ರಾತ್ರಿ 9-30 ಕ್ಕೆ ಅಪಘಾತವಾಗಿತ್ತು ,ಉತ್ತರಹಳ್ಳಿಯ ವಸಂತಪುರ ಮುಖ್ಯರಸ್ತೆಯಲ್ಲಿ ಅಪಘಾತವಾಗಿತ್ತು..ಇಬ್ಬರು ಪಾದಾಚಾರಿಗಳಾದ ಕೃಷ್ಣ ಮತ್ತು ಪ್ರೇಮಾ ಎಂಬುವರಿಗೆ ಅಪಘಾತವಾಗಿತ್ತು
ಅತಿವೇಗ ಮತ್ತು ನಿರ್ಲಕ್ಷ್ಯತೆಯಿಂದ ಕಾರು ಚಾಲಕ ವಾಹನ ಓಡಿಸಿದ್ದು ಅಪಘಾತಕ್ಕೆ ಕಾರಣವಾಗಿದೆ
ಆಕ್ಸಿಡೆಂಟ್ ಸ್ಪಾಟ್ ನಲ್ಲೇ ಪ್ರೇಮಾ ಮೃತಪಟ್ಟಿದ್ದಾರೆ.
ಕೃಷ್ಣರವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ
ಕಾರು ಚಾಲಕ ಫಿಲಂ ಆ್ಯಕ್ಟರ್ ನಾಗಭೂಷಣ್ ರನ್ನ ಅರೆಸ್ಟ್ ಮಾಡಲಾಗಿದೆ …ಮುಂದಿನ ಪ್ರೊಸೀಜರ್ ನಡೆಸಲಾಗ್ತಿದೆ.
ನಾಗಭೂಷಣ್ ರನ್ನ ಸ್ಟೇಷನ್ ಬೇಲ್ ನೀಡಿ ಕಳಿಸಲಾಗಿದೆ. ಮುಂದಿನ ವಿಚಾರಣೆಗೆ ಮತ್ತೆ ಕರೆಯಲಾಗುತ್ತೆ ಪ್ರಾಥಮಿಕ ತನಿಖೆಯಲ್ಲಿ ಅತಿ ವೇಗ ಅಪಘಾತಕ್ಕೆ ಕಾರಣವಾಗಿದೆ ..ರಾತ್ರಿಯೇ ಆಲ್ಕೊ ಹಾಲ್ ಟೆಸ್ಟಿಂಗ್ ಮೀಟರ್ ನಲ್ಲಿ ಕುಡಿದಿಲ್ಲ ಅನ್ನೋದು ಪತ್ತೆಯಾಗಿದೆ.
ಬ್ಲಡ್ ತೆಗೆದು ಟೆಸ್ಟಿಂಗ್ ಮೀಟರ್ ನಲ್ಲಿ ಕುಡಿದಿಲ್ಲ ಅನ್ನೋದು ಪತ್ತೆಯಾಗಿದೆ. ಬ್ಲಡ್ ತೆಗೆದು ಟೆಸ್ಟಿಂಗ್ ಗೂ ಕಳುಹಿಸಲಾಗಿದೆ. ಆಕ್ಸಿಡೆಂಟ್ ಮಾಡಿದ ಬಳಿಕ ಸ್ಥಳೀಯರ ಜೊತೆ ಸೇರಿ ಚಾಲಕ ಅಂದರೆ ನಟ ನಾಗಭೂಷಣ್ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ ಎಂದು ಸಂಚಾರ ದಕ್ಷಿಣ ಡಿಸಿಪಿ ಶಿವಪಕ್ರಾಶ್ ದೇವರಾಜ್ ಮಾಧ್ಯಮಕ್ಕೆ ತಿಳಿಸಿದ್ದಾರೆ