ಸೋಮವಾರ ನಡೆಯಬೇಕಿದ್ದ ಮುಖ್ಯಮಂತ್ರಿಯವರ ಜನತಾ ದರ್ಶನ ಇಲ್ಲ: ಸಿಎಂ ಕಚೇರಿ ಸ್ಪಷ್ಟನೆ
1 min readಸೋಮವಾರ ನಡೆಯಬೇಕಿದ್ದ ಮುಖ್ಯಮಂತ್ರಿಯವರ ಜನತಾ ದರ್ಶನ ಇಲ್ಲ: ಸಿಎಂ ಕಚೇರಿ ಸ್ಪಷ್ಟನೆ
*ಮುಖ್ಯಮಂತ್ರಿಗಳು ಭಾನುವಾರ ರಾತ್ರಿ ದೆಹಲಿಗೆ ತೆರಳುತ್ತಿರುವುದರಿಂದ ಸೋಮವಾರದ ಜನತಾ ದರ್ಶನ ಮುಂದೂಡಲ್ಪಟ್ಟಿದೆ*
*ಜನತಾ ದರ್ಶನದ ಮುಂದಿನ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು*
*ದೂರದ ಊರುಗಳಿಂದ ಬೆಂಗಳೂರಿಗೆ ಹೊರಡದಂತೆ ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ವಿನಂತಿಸಿದ್ದಾರೆ*
ಬೆಂಗಳೂರು : ದಿನಾಂಕ 09-10-23 ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಜನತಾ ದರ್ಶನದ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು. ಅಡಚಣೆಗಾಗಿ ವಿಷಾದಿಸುತ್ತೇವೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.