ಆಷಾಢದ ಮೊದಲ ಶುಕ್ರವಾರ – ಚಾಮುಂಡಿ ಬೆಟ್ಟದಲ್ಲಿ ಸಿದ್ದತೆ ಪೂರ್ಣ.!

1 min read

ಮೈಸೂರು: ಮೈಸೂರಿನ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಡಾ.ರಾಜೇಂದ್ರ ಮತ್ತು ನಗರದ ಪೊಲೀಸ್ ಆಯುಕ್ತರಾದ ರಮೇಶ.ಬಿ ಅವರಿಂದ ಸುದ್ದಿಗೋಷ್ಠಿ. ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ವಿಶೇಷ ಸೂಚನೆ.

ಭಕ್ತಾದಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಅನೇಕ ವ್ಯವಸ್ಥೆ ಮಾಡಲಾಗಿದೆ. ನಗರದ ಲಲಿತಮಹಲ್ ಹೆಲಿಫ್ಯಾಡ್ ಸಮೀಪದಿಂದ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತಾ ಮಹಲ್ ಪ್ಯಾಲೇಸ ನ ಹೆಲಿಪ್ಯಾಡ್ ನಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ. ಸಾರ್ವಜನಿಕರಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ. ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ 300ರೂ ಮತ್ತು 50 ರೂಪಾಯಿ ಟಿಕೆಟ್ ವಿತರಣೆ. ಪ್ಲಾಸ್ಟಿಕ್ ಮುಕ್ತವಾದ ಆಷಾಡಮಾಸ ಆಚರಣೆ ಮಾಡಲು ಸಿದ್ಧತೆ. ಎಲ್ಲಂದರಲ್ಲಿ ಪ್ಲಾಸ್ಟಿಕ್ ಬಿಸಾಡಿದವರಿಗೆ ದಂಡ ಬೀಳಲಿದೆ. ಮೆಟ್ಟಿಲುಗಳು ಮತ್ತು ದೇವಸ್ಥಾನ ಸೇರಿದಂತೆ ಅನೇಕ ಭಾಗಗಳಲ್ಲಿ ಕ್ಯಾಮೆರಗಳ ಅಳವಡಿಕೆ ಮಾಡಲಾಗುತ್ತಿದೆ. ಚಾಮುಂಡಿ ಬೆಟ್ಟಕ್ಕೆ ಹೊರಡುವ ಸಾರ್ವಜನಿಕರ ವಾಹನಗಳಿಗೆ ಸಂಪೂರ್ಣ ನಿಷೇಧ.

ಬಸ್ ನಲ್ಲಿ ಮಾತ್ರ ಪ್ರಯಾಣ ಮಾಡಬೇಕು. ಫುಡ್ ಪಾಯಿಸನ್ ಆಗುವ ಸಾಧ್ಯತೆ ಹಿನ್ನೆಲೆ. ಪ್ರಸಾದ ಕೌಂಟರ್ ಗಳಲ್ಲಿ ಫುಡ್ ಸೇಫ್ಟಿ ಆಫೀಸರ್ಸ್ ಗಳ ತಂಡ ಇರುತ್ತದೆ. ದೊಡ್ಡ ಮಟ್ಟದಲ್ಲಿ ಪ್ರಸಾದ ವಿತರಣೆ ಮಾಡುವವರು ಫುಡ್ ಸೇಫ್ಟಿ ಆಫೀಸರ್ಸ್ ಬಳಿ ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯ. ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿಕೆ

About Author

Leave a Reply

Your email address will not be published. Required fields are marked *