ಚಲನಚಿತ್ರ ನಟ ಚೇತನ್ ವಿರುದ್ಧ ಕ್ರಮಕ್ಕೆ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಆಗ್ರಹ
1 min readಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಬ್ರಾಹ್ಮಣ ಸಮಾಜದ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ನಟ ಚೇತನ್ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಸಮಾಜದ ಸ್ವಾಸ್ಥ್ಯ ಕದಡುವವರ ವಿರುದ್ಧ ಸರ್ಕಾರವು ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಆಗ್ರಹಿಸಿದೆ.
‘ಚೇತನ್ ಅವರು ಬ್ರಾಹ್ಮಣ ಸಮಾಜವನ್ನು ಭಯೋತ್ಪಾದಕರ ಜೊತೆ ಹೋಲಿಕೆ ಮಾಡಿ ಮಾತನಾಡಿದ್ದಾರೆ. ಇದು ನಾಡಿನಲ್ಲಿ ಅಶಾಂತಿಗೆ ಕಾರಣವಾಗಬಹುದಾಗಿದ್ದು, ಅವರ ಹೇಳಿಕೆಗಳು ಖಂಡನೀಯ. ಪ್ರಚಾರಕ್ಕೋಸ್ಕರ ಸಮಾಜದಲ್ಲಿ ಜಾತಿಗಳ ನಡುವೆ ವಿಷಬೀಜ ಬಿತ್ತುವ ಹಾಗೂ ಸಮಾಜದ ಶಾಂತಿಯನ್ನು ಕದಡುವ ಹೇಳಿಕೆಗಳು ಶಿಕ್ಷಾರ್ಹ’ .
ದೇಶದ ಹಿತಕ್ಕಾಗಿ ಹೋರಾಟ ನಡೆಸುತ್ತಾ ಬಂದಿರುವ ಬ್ರಾಹ್ಮಣ ಸಮುದಾಯ ಎಲ್ಲರಿಗೂ ಒಳಿತನ್ನೇ ಬಯಸುತ್ತಾ ಬಂದಿದೆ. ಹೀಗಿರುವಾಗ ಸಮುದಾಯವನ್ನು ಆಧ್ಯಾತ್ಮಿಕ ಭಯೋತ್ಪಾದಕರು ಎಂದು ಜರೆಯುವ ಮೂಲಕ ಸಮಾಜದ ಸಾಮರಸ್ಯ ಹಾಳು ಮಾಡುವ ಪ್ರಯತ್ನ ನಡೆಸಿರುವುದಲ್ಲದೆ ಬ್ರಾಹ್ಮಣ ಸಮುದಾಯದ ಬಗ್ಗೆ ಕೀಳುಮಟ್ಟದ ಮಾತುಗಳನ್ನಾಡುವ ಮೂಲಕ ಸಮುದಾಯದವರಿಗೆ ತೀವ್ರ ನೋವುಂಟು ಮಾಡಲಾಗಿದೆ ,ಈ ಕೂಡಲೇ ಬಹಿರಂಗ ಕ್ಷಮೆ ಯಾಚಿಸಬೇಕು ಸರ್ಕಾರವು ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.