ಕನ್ನಡದ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಇನ್ನಿಲ್ಲ: ಅಂಗಾಂಗ ದಾನ ಮಾಡಲು ಕುಟುಂಬಸ್ಥರ ನಿರ್ಧಾರ
1 min read
ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ಕನ್ನಡದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಶನಿವಾರ ರಾತ್ರಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತವಾಗಿ ಸಂಚಾರಿ ವಿಜಯ್ ತಲೆ ಹಾಗೂ ಕಾಲಿನ ಭಾಗಕ್ಕೆ ತೀವ್ರ ಪೆಟ್ಟಾಗಿತ್ತು. ಮೆದುಳಿನ ಬಲಭಾಗದಲ್ಲಿ ತೀವ್ರ ಗಾಯವಾಗಿ ರಕ್ತ ಸೋರುತ್ತಿದ್ದ ಹಿನ್ನೆಲೆ ಅವರರಿಗೆ ಬನ್ನೇರುಘಟ್ಟ ರಸ್ತೆಯಲ್ಲಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಿ ಐಸಿಯುನಲ್ಲಿ ಇರಿಸಲಾಗಿತ್ತು.

ಕೋಮದಲ್ಲಿದ್ದ ವಿಜಯ್ ಅವರ ಮೆದುಳಿನ ಕಾರ್ಯ ನಿಂತು ಹೋಗಿತ್ತು. ಈ ವೇಳೆ ಟ್ರೀಟ್ಮೆಂಟ್ಗೆ ಅವರು ಸ್ಪಂದಿಸುತ್ತಿಲ್ಲ ಎಂದು ವೈದ್ಯರು ಕುಟುಂಬಸ್ಥರಿಗೆ ಮಾಹಿತಿ ಕೊಟ್ಟಿದ್ರು. ಇದೀಗಾ ಕುಟುಂಬಸ್ಥರು ವಿಜಯ್ ಅವರ ಅಂಗಾಂಗಗಳನ್ನ ದಾನ ಮಾಡಲು ಸಹ ನಿಶ್ಚಯ ಮಾಡಿದ್ದು ಅದನ್ನ ಮತ್ತೊಬ್ಬರಿಗೆ ಅನುಕೂಲ ಆಗಲೆಂದು ಮಾನವೀಯತೆ ಮೆರೆದಿದ್ದಾರೆ.
ನಟ ಸಂಚಾರಿ ವಿಜಯ್ ಮೃತಪಟ್ಟಿದ್ದು ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದು ಸಿಎಂ ಬಿಎಸ್ ಯಡಿಯೂರಪ್ಪ ಸಹ ಸಂಚಾರಿ ವಿಜಯ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.