ರಾತ್ರೋ ರಾತ್ರಿ ನಟ ವಿಷ್ಣುವರ್ಧನ್ ಪ್ರತಿಮೆ ಸ್ಥಾಪನೆ: ಪೊಲೀಸರಿಂದ ತೆರವು; ಅಭಿಮಾನಿಗಳಿಂದ ಪ್ರತಿಭಟನೆ

1 min read

ಮೈಸೂರು,ಸೆ.18-ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ರಾತ್ರೋ ರಾತ್ರಿ ನಗರದ ಅರಮನೆ ಬಳಿಯ ಉದ್ಯಾನವನದಲ್ಲಿ ಪ್ರತಿಮೆ ಸ್ಥಾಪಿಸಿದ್ದು, ಅನಧಿಕೃತ ಪ್ರತಿಮೆಯನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಇದರಿಂದ ಕೋಪಗೊಂಡ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.
ಪಾಲಿಕೆ ಅನುಮತಿ ಪಡೆಯದೇ ಡಾ. ವಿಷ್ಣುವರ್ಧನ್ ಪ್ರತಿಮೆ ಸ್ಥಾಪನೆ ಮಾಡಿದ ಕಾರಣಕ್ಕಾಗಿ ಅನಧಿಕೃತ ಪ್ರತಿಮೆಯನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಪ್ರತಿಮೆ ತೆರವುಗೊಳಿಸಿದ್ದಕ್ಕೆ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಡಾ.ವಿಷ್ಣುವರ್ಧನ್ ಪ್ರತಿಮೆ ಸ್ಥಾಪನೆಗೆ ಅಭಿಮಾನಿಗಳು ಮನವಿ ಸಲ್ಲಿಸುತ್ತಾ ಬಂದಿದ್ದು, ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಅಭಿಮಾನಿಗಳು ವಿಷ್ಣುವರ್ಧನ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾತ್ರೋ ರಾತ್ರಿ ಯಾವುದೇ ಅನುಮತಿ ಪಡೆಯದೇ ಅರಮನೆ ಮುಂಭಾಗದ ಉದ್ಯಾನವನದಲ್ಲಿ ಪ್ರತಿಮೆ ಸ್ಥಾಪನೆ ಮಾಡಿದ್ದರು.

About Author

Leave a Reply

Your email address will not be published. Required fields are marked *