ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆಯ ಪರಿಕಲ್ಪನೆ ನೀಡಿದ್ದೇ ವಿಷ್ಣುವರ್ಧನ್: ಸಂದೇಶ್ ಸ್ವಾಮಿ

1 min read

ಮೈಸೂರು,ಸೆ.20-ಸಾಹಸಸಿಂಹ ಡಾ. ವಿಷ್ಣುವರ್ಧನ್ ಹುಟ್ಟುಹಬ್ಬದ ಅಂಗವಾಗಿ ವಿಷ್ಣು ಸೇನಾ ಸಮಿತಿ ಹಾಗೂ ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ವತಿಯಿಂದ ಜಿಲ್ಲಾವಾರು ವಿಷ್ಣು ಸೇವಕರಿಗೆ ಡಾ. ವಿಷ್ಣುವರ್ಧನ್ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನಗರದ ಚಾಮುಂಡಿಪುರಂ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 6 ಮಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ತಿ.ನರಸೀಪುರ ಶಿವು , ಹೊಸಳ್ಳಿ ಮಂಡ್ಯ ರಾಮಕೃಷ್ಣ ,ಬನ್ನೂರಿನ ಮಹೇಂದ್ರಸಿಂಗ್ ಕಾಳಪ್ಪ , ದೂರದ ಸೋಮಶೇಖರ್ ,ಎಚ್.ಡಿ.ಕೋಟೆ ಸಮೀವುಲ್ಲಾ, ಮೈಸೂರು ನಗರದ ಮುಬಾರಕ್ ಹಾಗೂ ಸಿದ್ದಪ್ಪ ಅವರಿಗೆ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಮಾಜಿ ಮಹಾಪೌರರಾದ ಸಂದೇಶ್ ಸ್ವಾಮಿ ಮಾತನಾಡಿ,ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆಯ ಪರಿಕಲ್ಪನೆ ನೀಡಿದ್ದೇ ವಿಷ್ಣುವರ್ಧನ ರವರು. ವಿಷ್ಣು ಅವರು ವಿಶ್ವದೆಲ್ಲಡೆ ಜನಪ್ರಿಯರಾಗಿದ್ದರು. ಅದ್ಭುತ ನಟನರಾಗಿದ್ದ ಅವರು ಕೌಟುಂಬಿಕ ಹಾಗೂ ಉತ್ತಮ‌ ಸಂದೇಶ ನೀಡುವ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಅವರು ಕಲಾವಿದರಿಗೆ ಸ್ಫೂರ್ತಿ. ಇಂತಹ ‌ಮಹಾನ್ ಕಲಾವಿದನ ಜಯಂತಿಯನ್ನು ರಾಜ್ಯ ಸರ್ಕಾರ ಆಚರಿಸಬೇಕೆಂದು ಮನವಿ ಮಾಡಿದರು.
ಕಾಂಗ್ರೆಸ್ ಯುವ ಮುಖಂಡ ಎನ್.ಎಂ. ನವೀನ್ ಕುಮಾರ್, ವಿಷ್ಣು ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಅಥವಾ ಪದ್ಮಭೂಷಣ ಪುರಸ್ಕಾರ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶ್ರೀ ಇಳೈ ಆಳ್ವಾರ್ ಸ್ವಾಮೀಜಿ , ಹಿರಿಯ ಸಮಾಜಸೇವಕ ಡಾ. ಕೆ ರಘುರಾಂ ವಾಜಪೇಯಿ, ಮಾಜಿ ನಗರಪಾಲಿಕೆ ಸದಸ್ಯರಾದ ಎಂ.ಡಿ ಪಾರ್ಥಸಾರಥಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ,
ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ,
ಕೃಷ್ಣರಾಜೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಅಪೂರ್ವ ಸುರೇಶ್ ,ಕಡಕೊಳ ಜಗದೀಶ್, ನಾಡಪ್ರಭು ಕೆಂಪೇಗೌಡರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಗಂಗಾಧರ್ ಗೌಡ
ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಎಸ್ ಎನ್ ರಾಜೇಶ್ ,ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ ,ವಿನಯ್ ಕಣಗಾಲ್, ಹರೀಶ್ ನಾಯ್ಡು ,ಮಹಾದೇವ್ ಇತರರು ಹಾಜರಿದ್ದರು.

About Author

Leave a Reply

Your email address will not be published. Required fields are marked *