ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಮನವಿ
1 min read
ಮೈಸೂರು: ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರದಿಂದ 50 ಸಾವಿರ ಪರಿಹಾರ ಘೋಷಣೆ ರೀತಿಯಲ್ಲೆ ಕರ್ನಾಟಕದಲ್ಲೂ ಮೃತರ ಕುಟುಂಬಕ್ಕೆ 50 ಸಾವಿರ ಪರಿಹಾರ ನೀಡಿ ಎಂದು ಬಿ ಎಸ್ ಯಡಿಯೂರಪ್ಪಗೆ ಮೈಸೂರಿನ ವ್ಯಕ್ತಿ ಪತ್ರ ಬರೆದು ಮನವಿ ಮಾಡಿದ್ದಾರೆ.
ಮೈಸೂರು ಮಹಾನಗರ ಪಾಲಿಕೆ ಸದಸ್ಯ ಲೊಕೇಶ್ ಪಿಯಾ ಎಂಬುವವರು ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಿ ಮೃತರ ಕುಟುಂಬಕ್ಕೆ 50 ಸಾವಿರ ಪರಿಹಾರ ನೀಡಿ ಹಾಗೂ ಕುಟುಂಬದವರಿಗೆ ಮಾಸಿಕ 2500 ರೂ ನಂತೆ ಮಾಸಾಶನ ನಿಡಿ ಅಂತ ಅಪರ ಜಿಲ್ಲಾಧಿಕಾರಿ ಮಂಜುನಾಥ್ ಮೂಲಕ ಸಿಎಂ ಬಿ ಎಸ್ ಯಡಿಯೂರಪ್ಪಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ.

