ಅಸಾನಿ ಚಂಡಮಾರುತದ ಪರಿಣಾಮ, ರಾಜ್ಯಾಧ್ಯಂತ ಇಂದಿನಿಂದ 3 ದಿನ ಭಾರೀ ಮಳೆ
1 min readಬೆಂಗಳೂರು: ಅಸಾನಿ ಚಂಡಮಾರುತದ ಪರಿಣಾಮದಿಂದಾಗಿ, ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆ ( Heavy Rain ) ಮುಂದಿನ 3 ಮೂರು ದಿನ ಆಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ( Yellow Alert ) ಕೂಡ ಘೋಷಿಸಿದೆ.
ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯೂ, ಅಸಾನಿ ಚಂಡಮಾರುತವು ಆಂಧ್ರಪ್ರದೇಶದ ವಿಶಾಖಪಟ್ಟಣಂ, ಒಡಿಶಾದ ಪುರಿಗೆ ಕಾಲಿಟ್ಟಿದೆ. ಈ ಪರಿಣಾಮವಾಗಿ, ಇಂದು ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಹಾಸನ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಹಾವೇರಿ, ಮೈಸೂರು, ಚಾಮರಾಜನಗರ, ಗದಗ, ದಾವಣಗೆರೆ, ಯಾದಗಿರಿ, ಬೆಳಗಾವಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ತಿಳಿಸಿದೆ. ಮುಂದಿನ ಎರಡು ಮೂರು ದಿನ ಮಳೆ ಮುಂದುವರೆಯಲಿದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವ ಕಾರಣ, ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.