ಔರದ್ಕಾರ್ ವರದಿ ಯಥಾವತ್ ಜಾರಿ ಕಷ್ಟ – ಗೃಹ ಸಚಿವ ಪರಮೇಶ್ವರ್ ಹೇಳಿಕೆ.!

1 min read

ಮೈಸೂರು: ಗೃಹ ಸಚಿವ ಡಾ.‌ಜಿ. ಪರಮೇಶ್ವರ್ ಮೈಸೂರಿಗೆ ಭೇಟಿ ನೀಡಿದ್ದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.50 ಲಕ್ಷ ಹುದ್ದೆಗಳನ್ನ ಭರ್ತಿ ಮಾಡುವ ಕಾರ್ಯ ಶುರುವಾಗಿದೆ ಎಂದು ಹೇಳಿದ್ದಾರೆ. ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆ ಖಾಲಿ ಇದ್ದು, ಮೊದಲ ಹಂತದಲ್ಲಿ 4 ಸಾವಿರ ಪೊಲೀಸ್ ಪೇದೆ ನೇಮಕಾತಿ ಆಗಲಿದೆ ಎಂದಿದ್ದಾರೆ.

400 ಸಬ್ ಇನ್ಸ್ ಪೆಕ್ಟರ್ ಹುದ್ದೆ ಭರ್ತಿ ಮಾಡುವುದಕ್ಕೆ ಮುಂದಾಗಿದ್ದೇವೆ.

ಇನ್ನೂ ಸಬ್ ಇನ್ಸಪೆಕ್ಟರ್ ಹುದ್ದೆ ನೇಮಕಾತಿ ಅಕ್ರಮ ವಿಚಾರ ಅಕ್ರಮ ಕುರಿತ ವಿಚಾರಣೆಯಲ್ಲಿ ನ್ಯಾಯಾಲಯ ಸರ್ಕಾರದ ಅಭಿಪ್ರಾಯ ಕೇಳಿದೆ. ನ್ಯಾಯಾಲಯಕ್ಕೆ ಜುಲೈ 5ನೇ ತಾರೀಖು ನಮ್ಮ‌ ಅಭಿಪ್ರಾಯ ಹೇಳುತ್ತೇವೆ. ಔರದ್ಕಾರ್ ವರದಿ ಯಥಾವತ್ ಜಾರಿ ಕಷ್ಟ ಈಗಾಗಲೇ ಭಾಗಶಃ ವರದಿ ಅನುಷ್ಠಾನ ಆಗಿದೆ. ಸಂಬಳದ ವಿಚಾರದ ವರದಿ ಜಾರಿ ಬಗ್ಗೆ ಚಿಂತನೆ. ಪೊಲೀಸರಿಗೆ ವಾರದ ರಜೆ ಕೊಡಬೇಕು ಅದನ್ನು ಅನುಷ್ಠಾನ ಮಾಡುತ್ತೇನೆ ಅದು ಅವರಿಗೆ ಅವಶ್ಯಕವಾಗಿ ಬೇಕಾಗಿದೆ. ಈ ಮೂಲಕ ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ. ನಂತರ ಉತ್ತಮವಾಗಿ ಕೆಲಸ ಮಾಡಬಹುದು. ಪೊಲೀಸ್ ಅಧಿಕಾರಿಗಳ ವಾರದ ರಜೆ ಪರ ನಾನಿದ್ದೇನೆ. ರಾತ್ರಿ ಪಾಳಿ ಮಾಡಿದವರಿಗೆ ವಿಶೇಷ ಭತ್ಯೆ ಕೊಡುವ ವಿಚಾರದಲ್ಲೂ ಅದಷ್ಟು ಬೇಗ ತೀರ್ಮಾನ. ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ಸು ತೆಗೆದುಕೊಳ್ಳುತ್ತೇವೆ ಎಂದರು.

ಬೆಂಗಳೂರು ಮೈಸೂರು ಟೋಲ್ ವಿಚಾರ :

ಬೆಂಗಳೂರು – ಮೈಸೂರು ಹೈವೆಯಲ್ಲಿ ಸುಗಮ – ಸುರಕ್ಷಿತ ಸಂಚಾರ ವಿಚಾರ. ಇದಕ್ಕೆ ಯಾವುದೇ ಕ್ರಮವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೆಗೆದು ಕೊಂಡಿಲ್ಲ. ಹೈವೆಯಲ್ಲಿ ಸಂಚಾರ ಸೂಚನ‌ ಫಲಕ ಯಾವುದು ಅಳವಡಿಕೆ ಆಗಿಲ್ಲ. ಬೇರೆ ಹೈವೆಗಳ ರೀತಿ ಇಲ್ಲಿ ವ್ಯವಸ್ಥಿತವಾಗಿ ಏನು ಮಾಡಿಲ್ಲ. ರಾಜ್ಯದ ಸಂಚಾರ ವಿಭಾಗದ ಎಡಿಜಿಪಿ ನನಗೆ ಈ ಬಗ್ಗೆ ಮೌಖಿಕವಾಗಿ ವರದಿ ಕೊಟ್ಟಿದ್ದಾರೆ. ಹೆದ್ದಾರಿಯಲ್ಲಿ ದರೋಡೆ ಕೂಡ ನಡೆಯುತ್ತಿವೆ ಇದನ್ನು ತಡೆಯಲು ಕ್ರಮವಹಿಸಿದ್ದೇವೆ. ಹೆದ್ದಾರಿ ಪ್ರಾಧಿಕಾರಕ್ಕೆ ಟೋಲ್ ವಸೂಲಿ ಬೇಡ ಅಂತಾ ಸೂಚನೆ ಕೊಟ್ಟಿದ್ದೆವು. ಆದರೂ ಟೋಲ್ ವಸೂಲಿ ಶುರು ಮಾಡಿದ್ದಾರೆ.

ಹೆದ್ದಾರಿ ಪ್ರಾಧಿಕಾರ ಕೇಂದ್ರ ಸರಕಾರದ ನಿಯಂತ್ರಣದಲ್ಲಿದೆ. ಅವಸರವಾಗಿ ಹೆದ್ದಾರಿ ಉದ್ಘಾಟನೆ ಮಾಡಿದರು. ರಾಜಕೀಯ ದುರುದ್ದೇಶದಿಂದ ತರಾತುರಿಯಲ್ಲಿ ಉದ್ಘಾಟನೆ ಮಾಡಿದರು. ಹೀಗಾಗಿ ಇಷ್ಟೆಲ್ಲ ಸಮಸ್ಯೆ ಆಗುತ್ತಿದೆ. ಹೈವೆಯಲ್ಲಿ ಇಷ್ಟು ಬೇಗ ಅಷ್ಟು ಜನ ಸಾಯುತ್ತಾರೆ ಎಂದರೆ ಅದರ ಅರ್ಥ ಬಹಳ ಲೋಪವಾಗಿದೆ ಎಂದು. ಹೈವೆಯಲ್ಲಿ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ವಿಚಾರ. ಜನರಿಗೆ ತೊಂದರೆ ಆಗದಂತೆ ಜನರ ಸುರಕ್ಷತೆಗೆ ಬೇಕಾದ ಕ್ರಮ ಜರುಗಿಸುತ್ತೇವೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಡಾ ಪರಮೇಶ್ವರ್ ಹೇಳಿಕೆ ನೀಡಿದರು.

About Author

Leave a Reply

Your email address will not be published. Required fields are marked *