ಕೋಡಿಹಳ್ಳಿ ಚಂದ್ರಶೇಖರ್‌ರನ್ನು ವಶಕ್ಕೆ ಪಡೆದ ಪೊಲೀಸರು
1 min read
ಬೆಳಗಾವಿ: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ ಎನ್ನಲಾಗಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸಾರಿಗೆ ನೌಕರರ ಜೊತೆ ಸಭೆ ನಡೆಸಲು ನಿರ್ಧರಿಸಿದ್ದ ಕೋಡಿಹಳ್ಳಿ ಅವರನ್ನು ಪೊಲೀಸರು ಬೆಳಗಾವಿಯ ಹೋಟೆಲ್‌ನಿಂದ ಹಿರೇಬಾಗೇವಾಡಿ ಠಾಣೆಗೆ ಕರೆದೊಯ್ದಿದ್ದಾರೆ. ಸರ್ಕಾರ ಪ್ರತಿಭಟನೆ ಹತ್ತಿಕ್ಕುತ್ತಿದೆ, ದಮನಕಾರಿ ನೀತಿಯನ್ನು ಅನುಸರಿಸುತ್ತಿದ್ದು, ಅಕ್ರಮವಾಗಿ ನನ್ನನ್ನು ಬಂಧಿಸಲಾಗಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಅವರು ಹೇಳಿದ್ದಾರೆ.
