ಬಾಂಡ್ ರವಿ’ ಸಿನಿಮಾದ ಶೂಟಿಂಗ್ ಕಂಪ್ಲೀಟ್!

1 min read

ಪ್ರಮೋದ್ ನಟನೆಯ ‘ಬಾಂಡ್ ರವಿ’ ಸಿನಿಮಾದ ಶೂಟಿಂಗ್ ಕಂಪ್ಲೀಟ್..ಕುಂಬಳಕಾಯಿ ಹೊಡೆದ ಚಿತ್ರತಂಡ

ಸ್ಯಾಂಡಲ್‌ವುಡ್‌ನಲ್ಲಿ ಬ್ಯುಸಿಯೆಸ್ಟ್ ಹೀರೋಗಳಲ್ಲಿ ಒಬ್ಬರಾಗಿರುವ ಮಂಡ್ಯ ಹೈದ ಪ್ರಮೋದ್ ನಟನೆಯ ಬಹುನಿರೀಕ್ಷಿತ ಬಾಂಡ್ ರವಿ ಸಿನಿಮಾದ ಚಿತ್ರೀಕರಣ ಕಂಪ್ಲೀಟ್‌ ಆಗಿದ್ದು, ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಬೆಂಗಳೂರು, ಶಿವಮೊಗ್ಗ, ಕೊಡಚಾದ್ರಿ, ಕುದುರೆಮುಖ, ಉಡುಪಿ ಮಂಗಳೂರು ಭಾಗದಲ್ಲಿ ಸುಮಾರು 50 ದಿನಗಳ‌ ಕಾಲ ಶೂಟಿಂಗ್ ಮುಗಿಸಿರುವ ಬಾಂಡ್ ರವಿ ಬಳಗ ಕುಂಬಳಕಾಯಿ ಹೊಡೆದಿದೆ.

ಕಳೆದ ಹನ್ನೊಂದು ವರ್ಷದಿಂದ ನಿರ್ದೇಶನದ ವಿಭಾಗದಲ್ಲಿ ಕೆಲಸ ಮಾಡಿರುವ ಪ್ರಜ್ವಲ್ ಎಸ್ ಪಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಬಾಂಡ್ ರವಿ ಆಕ್ಷನ್ ಲವ್ ಸ್ಟೋರಿ ಸಿನಿಮಾವಾಗಿದ್ದು, ಈ ಹಿಂದೆ ಮಾದ ಮಾನಸಿ ಸಿನಿಮಾ ನಿರ್ಮಾಣ ಮಾಡಿದ್ದ ನರಸಿಂಹಮೂರ್ತಿ ಲೈಫ್ ಲೈನ್ ಫಿಲ್ಮ್ಸ್ ಬ್ಯಾನರ್ ನಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಕೊಂಡಿದ್ದಾರೆ.

ಕಾಜಲ್ ಕುಂದರ್ ಪ್ರಮೋದ್ ಗೆ ಜೋಡಿಯಾಗಿ ನಟಿಸ್ತಿದ್ದು , ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸ್ತಿದ್ದು, ಕೆಎಸ್ ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನಿಲ್& ದೇವ್ ಎನ್ ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ಸಿನಿಮಾಕ್ಕಿದೆ ಜಯಂತ್ ಕಾಯ್ಕಿಣಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ.

About Author

Leave a Reply

Your email address will not be published. Required fields are marked *