ವಿಜಯೇಂದ್ರ ಸದ್ಯಕ್ಕೆ ಯಾವುದೇ ಚುನಾವಣೆಯಲ್ಲಿ ನಿಲ್ಲಲ್ಲ- ಯಡಿಯೂರಪ್ಪ ಸ್ಪಷ್ಟನೆ!

1 min read

ಮೈಸೂರು : ಸದ್ಯಕ್ಕೆ ಬಿ.ವೈವಿಜಯೇಂದ್ರ ಯಾವುದೇ ಉಪ ಚುನಾವಣೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಮೈಸೂರಿನಲ್ಲಿ ಹೇಳಿದ್ದಾರೆ. ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ಯಡಿಯೂರಪ್ಪನವರು ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು. ಮಠಕ್ಕೆ ಬಂದ ಯಡಿಯೂರಪ್ಪನವರಿಗೆ ಮಠದ ವತಿಯಿಂದ ಪೂರ್ಣಕುಂಭ ಸ್ವಾಗತ ಕೋರಿದ್ರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಯಡಿಯೂರಪ್ಪ ವಿಜಯೇಂದ್ರ ಅವರು ಯಾವ ಕ್ಷೇತ್ರದಲ್ಲಿ ಮುಂದೆ ನಿಲ್ಲುತ್ತಾರೆ ಅನ್ನೋದು ನಿರ್ಧಾರವಾಗಿಲ್ಲ. ಸದ್ಯ ಅವರು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ನಾನು ಮತ್ತು ರಾಜ್ಯಾಧ್ಯಕ್ಷರು ಸೇರಿ ರಾಜ್ಯ ಪ್ರವಾಸ ಮಾಡುತ್ತೇವೆ. ಬಳಿಕ ಅಧಿವೇಷನ ಮುಗಿಯಲಿ 15 ದಿನಗಳ ನಂತರ ಈ‌ ಬಗ್ಗೆ ರೂಪುರೇಷೆ ಮಾಡುತ್ತೇವೆ ಎಂದ್ರು. ಇನ್ನು ಸಿಎಂ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ ಅನ್ನೋದು ನನ್ನ ಅಭಿಪ್ರಾಯವಾಗಿದ್ದು, ರಾಜ್ಯದ ಜನರ ಅಭಿಪ್ರಾಯವೂ ಅದೇ ಆಗಿದೆ. ಮುಂದಿನ ದಿನದಲಿ ಇನ್ನು ಉತ್ತಮ ಆಡಳಿತ ನೀಡಲಿದ್ದಾರೆ ಎಂದಿದ್ದಾರೆ.

About Author

Leave a Reply

Your email address will not be published. Required fields are marked *